ಬೆಂಗಳೂರು: ಕನ್ನಡದಲ್ಲಿ ಮತ್ತೊಂದು ಹಾರರ್ ಚಿತ್ರವು ತೆರೆ ಮೇಲೆ ಬರಲು ಸಿದ್ಧವಾಗಿದೆ. ರಾಜು ಅವರು ನಿರ್ದೇಶಿಸಿರುವ ‘ಅನಘ’ ಹೆಸರಿನ ಈ ಚಿತ್ರದಲ್ಲಿ ಬಹುತೇಕ ಹೊಸ ಪಾತ್ರವರ್ಗವೇ ಇದೆ.

ಇದೊಂದು ಸಸ್ಪೆನ್ಸ್, ಹಾರರ್ ಚಿತ್ರವಾಗಿದೆ. ಚಿತ್ರದಲ್ಲಿ ರಂಗಭೂಮಿ ಪ್ರತಿಭೆಗಳಾದ ನಳಿನ್ ಕುಮಾರ್ ಮತ್ತು ಪವನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪೋಷಕ ಪಾತ್ರದಲ್ಲಿ ಸಿಲ್ಲಿ ಲಲ್ಲಿ ಖ್ಯಾತಿಯ ಶ್ರೀನಿವಾಸ್ ಗೌಡ್ರು, ಕಿರಣತೇಜ, ಕಿರಣ್ ರಾಜ್, ಕರಣ್ ಆರ್ಯನ್, ದೀಪ, ಖುಷಿ, ರಶ್ಮಿ, ವಿಶೇಷ ಪಾತ್ರದಲ್ಲಿ ನಂಜಪ್ಪ ಬೆನಕ, ಮೋಟು ರವಿ ಕಾಣಿಸಿಕೊಂಡಿದ್ದಾರೆ. ರಾಜು ಅವರ ನಿರ್ದೇಶನದ ಮೊದಲ ಚಿತ್ರ ಇದಾಗಿದ್ದು, ಬೆಂಗಳೂರು ಹಾಗೂ ದೇವರಾಯನ ದುರ್ಗದ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಚಿತ್ರಕ್ಕೆ ಶಂಕರ್ ಅವರ ಕ್ಯಾಮೆರಾ ಕೈಚಳಕವಿದ್ದು, ಅವಿನಾಶ್ ಸಂಗೀತ ನೀಡಿದ್ದಾರೆ. ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮಾಡಿದ್ದಾರೆ. ಶೀಘ್ರದಲ್ಲೇ ತೆರೆಯ ಮೇಲೆ ಚಿತ್ರವು ಬರಲಿದೆ ಎನ್ನುತ್ತಾರೆ ರಾಜು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.