ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇದು ‘ಸರ್ವೇ ನಂಬರ್ 45’

Published 31 ಆಗಸ್ಟ್ 2024, 5:32 IST
Last Updated 31 ಆಗಸ್ಟ್ 2024, 5:32 IST
ಅಕ್ಷರ ಗಾತ್ರ

ಹೊಸಬರೇ ಸೇರಿಕೊಂಡು ನಿರ್ಮಿಸುತ್ತಿರುವ ‘ಸರ್ವೇ ನಂಬರ್ 45’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಹಿರಿಯ ನಿರ್ದೇಶಕ ಹೆಚ್.ವಾಸು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಶಿವಕುಮಾರ್ ಎಂ.ಶೆಟ್ಟಿಹಳ್ಳಿ ನಿರ್ದೇಶನವಿದ್ದು, ವರನಂದಿ ಸಿನಿ ಸಂಸ್ಥೆ ಬಂಡವಾಳ ಹೂಡಿದ್ದಾರೆ. 

‘ಭೂಮಿ, ಜಾಗಕ್ಕೆ ಸರ್ವೇ ನಂಬರ್ ಎಂದು ಸರ್ಕಾರವು ನೀಡಿರುತ್ತದೆ. ಇದಕ್ಕೆ ಸಂಬಂಧಿಸಿದ ಕಥೆ. ಕೆಟ್ಟದ್ದನ್ನು ಮಾಡಲು ಮುಂದಾದರೆ ಅನಾಹುತಗಳು ಕಟ್ಟಿಟ್ಟ ಬುತ್ತಿ. ಒಳಿತನ್ನು ಬಯಸಿದರೆ ಒಳ್ಳೆಯದೇ ಆಗುತ್ತದೆ ಎಂಬ ಸಂದೇಶ ಚಿತ್ರದಲ್ಲಿದೆ. ಮೈಸೂರು, ಹಾಸನ, ಮಂಡ್ಯದಲ್ಲಿ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ಸೆಪ್ಟಂಬರ್ ಮೊದಲ ವಾರದಿಂದ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ’ ಎಂದರು ನಿರ್ದೇಶಕರು.

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಸಂತೋಷ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಿಯಾಭಾಸ್ಕರ್ ಚಿತ್ರದ ನಾಯಕಿ. ಮುನಿ, ಜಗದೀಶ್ ಕೊಪ್ಪ, ಸಂಜಯ್ ಪಾಟೀಲ್ ಮುಂತಾದವರು ನಟಿಸುತ್ತಿದ್ದಾರೆ. ವಿಶಾಲ್ ಆಲಾಪ್ ಸಂಗೀತ, ದೀಪಕ್ ಕುಮಾರ್.ಜಿ.ಕೆ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT