‘ಸೈರನ್’ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ ನಟ ಪ್ರವೀರ್ ಶೆಟ್ಟಿ ಈಗ ಮತ್ತೊಂದು ಭಿನ್ನ ಕಥೆಯ ಸಿನಿಮಾ ಮೂಲಕ ಪ್ರೇಕ್ಷಕರೆದುರಿಗೆ ಬರಲಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್ ‘ನಿದ್ರಾದೇವಿ Next Door’ ಸಿನಿಮಾದ ಚಿತ್ರೀಕರಣಕ್ಕೆ ಕ್ಲ್ಯಾಪ್ ಮಾಡಿದರು. ಸುರಾಗ್ ಸಾಗರ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಿಷಿಕಾ ಈ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

‘ಇಬ್ಬರು ನಿದ್ದೆ ಇಲ್ಲದವರ ಪಯಣವಿದು. ಅವರಿಗೆ ಯಾಕೆ ನಿದ್ದೆ ಬರಲ್ಲ? ಇದಕ್ಕೆ ಪರಿಹಾರ ಏನು? ಅದರೊಳಗೆ ಅವರು ಕಂಡುಕೊಳ್ಳುವ ಲವ್ ಸ್ಟೋರಿ ಈ ಚಿತ್ರದ ಕಥಾಹಂದರ’ ಎಂದಿದೆ ಚಿತ್ರತಂಡ. ಸುರಾಗ್‌ಗೆ ಇದು ಚೊಚ್ಚಲ ಸಿನಿಮಾವಾಗಿದ್ದು, ಸುಧಾರಾಣಿ, ಶ್ರೀವತ್ಸ, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿ ಇದ್ದಾರೆ. ಸೂರಂ ಮೂವೀಸ್ ಬ್ಯಾನರ್‌ನಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸಿರುವ ಈ ಚಿತ್ರಕ್ಕೆ ಅಜಯ್ ಕುಲಕರ್ಣಿ ಛಾಯಾಚಿತ್ರಗ್ರಹಣ ಮತ್ತು ನಕುಲ್ ಅಭ್ಯಂಕರ್ ಸಂಗೀತವಿದೆ. ಚಿತ್ರತಂಡ ಈಗಾಗಲೇ ಶೂಟಿಂಗ್ ಆರಂಭಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.