ಬುಧವಾರ, ಮೇ 25, 2022
29 °C

‘ಮೂರು ಮತ್ತೊಂದು’ ಚಿತ್ರದಲ್ಲಿ ಮಮತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರಕಾಶ್ ಅಂಕಪುರ ಕಥೆ ಬರೆದು ನಿರ್ದೇಶಿಸುತ್ತಿರುವ ‘ಮೂರು ಮತ್ತೊಂದು’ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮೈಸೂರು, ಸಕಲೇಶಪುರದ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ.

ವಿಪ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ವೀಣಾ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಲವ್, ಸಸ್ಪೆನ್ಸ್ ಹಾಗೂ ಹಾರರ್ ಕಥಾಹಂದರ ಒಳಗೊಂಡಿದೆ. ಚಿತ್ರದಲ್ಲಿ ಮೂರು ಹಾಡುಗಳಿವೆ. ನಾಯಕಿ ಮಮತಾ, ಬಿಕಾಂ ಓದುತ್ತಿರುವ ವಿದ್ಯಾರ್ಥಿನಿ. ಬೆಂಗಳೂರು ಮೂಲದ ಈಕೆ ನೃತ್ಯ ನಾಟಕ, ಸಂಗೀತದ ಬಗ್ಗೆ ಆಸಕ್ತಿ ಹೊಂದಿದ್ದಾರೆ. 

ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ಮಮತಾ, ‘ಶಾಲೆಯಲ್ಲಿ ಓದುತ್ತಿರುವಾಗಲೇ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೆ. ಪುಟ್ ಬಾಲ್ ಆಟಗಾರ್ತಿಯಾಗಿ ರಾಷ್ಟ್ರ ಮಟ್ಟದ ಪುಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದೆ. ನಿರ್ದೇಶಕರು ಪರಿಚಯವಾದ ನಂತರ ಚಿತ್ರದಲ್ಲಿ ಅವಕಾಶ ನೀಡಿದ್ದಾರೆ’ ಎಂದು ಹೇಳಿದರು.

ಚಿತ್ರಕ್ಕೆ ಸುರೇಶ್ ಬಾಬು ಛಾಯಾಗ್ರಹಣವಿದ್ದು, ಪಳನಿ ಸೇನಾಪತಿ ಸಂಗೀತ ,ಗಣೇಶ್ ಶೆಟ್ಟಿ ಚಿತ್ರಕಥೆ ಸಂಭಾಷಣೆ ಹಾಗೂ ಸಹಕಾರ ನಿರ್ದೇಶನವಿದೆ. ಹ್ಯಾರಿಸ್ ಜಾನಿ ಸಾಹಸ ನಿರ್ದೇಶನವಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು