ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್ನಲ್ಲಿ ಭಾರತೀಯ ಚಿತ್ರಗಳಾದ ‘ಶೋಲೆ’ ಹಾಗೂ ‘ಬೂಂಗ್’ ಪ್ರದರ್ಶನಗೊಳ್ಳಲಿವೆ.

ಅಮಿತಾಭ್ ಮತ್ತು ಧರ್ಮೇಂದ್ರ ನಟನೆಯ ‘ಶೋಲೆ’ ಚಿತ್ರ ಬಿಡುಗಡೆಯಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಈ ಚಿತ್ರವನ್ನು4K ಗುಣಮಟ್ಟದಲ್ಲಿ ಮರುಸ್ಥಾಪಿಸಿದೆ.

ಎನ್ವೈಐಎಫ್ಎಫ್ ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ರಮೇಶ್ ಸಿಪ್ಪಿ ನಿರ್ದೇಶನದ ಈ ಸಿನಿಮಾದಲ್ಲಿ ಧರ್ಮೇಂದ್ರ ಅವರು ವೀರು ಪಾತ್ರದಲ್ಲಿ ನಟಿಸಿದ್ದರು. ಈ ಬಾರಿಯ ಚಿತ್ರೋತ್ಸವದ ಉದ್ಘಾಟನಾ ಸಿನಿಮಾವಾಗಿ ‘ಬೂಂಗ್’ ಸಿನಿಮಾ ಆಯ್ಕೆ ಆಗಿದೆ. ಇದು ‘ಅತ್ಯುತ್ತಮ ಮಕ್ಕಳ ಮತ್ತು ಕೌಟುಂಬಿಕ ಚಿತ್ರ’ ವಿಭಾಗದಲ್ಲಿ ಬಿಎಎಫ್ಟಿಎ (ಬ್ರಿಟಿಷ್ ಅಕಾಡೆಮಿ ಆಫ್ ಫಿಲ್ಮ್ ಆ್ಯಂಡ್ ಟೆಲಿವಿಷನ್ ಆರ್ಟ್ಸ್) ಪ್ರಶಸ್ತಿಯನ್ನು ಪಡೆದು ಇತಿಹಾಸ ನಿರ್ಮಿಸಿತ್ತು.

ಈ ಚಲನಚಿತ್ರೋತ್ಸವವು ಮೇ 28ರಿಂದ 31ರವರೆಗೆ ನಡೆಯಲಿದೆ. 15 ಭಾಷೆಗಳ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-4-2127527679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.