ಹೆಸರಿಡದ ಹೊಸ ಚಿತ್ರದ ಶೂಟಿಂಗ್ನಲ್ಲಿ ನಿಖಿಲ್ ಬ್ಯುಸಿ

ರೈಡರ್ ಸಿನಿಮಾದ ಯಶಸ್ಸಿನ ಖುಷಿಯಲ್ಲಿದ್ದಾರೆ ನಿಖಿಲ್ ಕುಮಾರ್. ಈಗ ಹೆಸರಿಡದ ಹೊಸ ಸಿನಿಮಾ ಸೆಟ್ಟೇರಿದ್ದು ಅದರಲ್ಲಿ ನಿಖಿಲ್ ನಾಯಕ. ಮಂಜು ಅಥರ್ವ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಪ್ರೇಮಂ ಪೂಜ್ಯಂಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವ ಅಥರ್ವ ಅವರದ್ದು.
ಹೊಸ ಚಿತ್ರದ ಮೊದಲ ಹಂತದ ಶೂಟಿಂಗ್ ಶುರುವಾಗಿದೆ. ನಿಖಿಲ್ ಅವರ ಭಾಗದ ಶೂಟಿಂಗ್ ನಡೆಯುತ್ತಿದೆ. ಪಕ್ಕಾ ಆ್ಯಕ್ಷನ್, ಕೌಟುಂಬಿಕ ಮನೋರಂಜನೆಯ ಚಿತ್ರವಿದು. ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ. ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ.
ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದಾರೆ. ಸಿನಿಮಾಟೋಗ್ರಾಫರ್ ನವೀನ್ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ ಎಂದಿದೆ ಚಿತ್ರತಂಡ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.