ಬುಧವಾರ, ಫೆಬ್ರವರಿ 19, 2020
29 °C

PHOTOS| ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ, ನಟ ನಿಖಿಲ್‍ ಕುಮಾರಸ್ವಾಮಿ ಅವರ ವಿವಾಹದ ನಿಶ್ಚಿತಾರ್ಥ ಸೋಮವಾರ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಅದ್ಧೂರಿಯಾಗಿ ನೆರವೇರಿತು.

ಶಾಸಕ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ ರೇವತಿ ಅವರೊಂದಿಗೆ ನಿಖಿಲ್‍ ಕುಮಾರಸ್ವಾಮಿ ವಿವಾಹದ ನಿಶ್ಚಿತಾರ್ಥವು ಎರಡೂ ಕುಟುಂಬಗಳ ಬಂಧು-ಬಳಗ ಹಾಗೂ ಹಿರಿಯರ ಸಮ್ಮುಖದಲ್ಲಿ ನೆರವೇರಿತು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಶಾಸಕ ಎಚ್.ಡಿ.ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ನಿಶ್ಚಿತಾರ್ಥದಲ್ಲಿ ಭಾಗವಹಿಸಿದ್ದರು.

ವಿವಿಧ ಪಕ್ಷಗಳ ರಾಜಕೀಯ ನಾಯಕರು, ಮುಖಂಡರು, ಚಲನಚಿತ್ರರಂಗದ ಗಣ್ಯರು, ಉಭಯ ಕುಟುಂಬಗಳ ಬಂಧುಗಳು, ಹಿತೈಷಿಗಳು ನಿಶ್ಚಿತಾರ್ಥಕ್ಕೆ ಆಗಮಿಸಿ ನಿಖಿಲ್ ಹಾಗೂ ರೇವತಿ ಅವರಿಗೆ ಶುಭ ಹಾರೈಸಿದರು.

ಹಣೆಗೆ ಕುಂಕುಮ

 

ಸಂಭ್ರಮದ ಗಳಿಗೆ
ಮೊಮ್ಮಗನ ​​​​ನಿಶ್ಚಿತಾರ್ಥದಲ್ಲಿ ಮಾಜಿ ಪ್ರಧಾನಿ ದೇವೇಗೌಡ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು