ಯುವರಾಜ ನಿಖಿಲ್ ಈಗ ಯದುವೀರ!

ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಅವರ ಐದನೇ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದ ಹೆಸರು ‘ಯದುವೀರ’. ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದೆ.
‘ಯದುವೀರ’ ಸಿನಿಮಾಗೆ ಮಂಜು ಅಥರ್ವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಯಶ್ ನಟನೆಯ ‘ಮಾಸ್ಟರ್ ಪೀಸ್’, ಶಿವರಾಜ್ ಕುಮಾರ್ ಅಭಿನಯದ ‘ಮಫ್ತಿ’ ಸಿನಿಮಾಗಳಿಗೆ ಸಹ ನಿರ್ದೆಶಕರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
‘ಯದುವೀರ್’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ‘ಮಫ್ತಿ’, ‘ಮದಗಜ’ ಸಿನಿಮಾಗಳ ಸಿನಿಮಾಟೋಗ್ರಾಫರ್ ನವೀನ್ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.