ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಂಟರ್’ ಆಗಲಿದ್ದಾರೆ ನಿರಂಜನ್ ಸುಧೀಂದ್ರ

Last Updated 22 ಆಗಸ್ಟ್ 2021, 16:50 IST
ಅಕ್ಷರ ಗಾತ್ರ

ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ‘ಹಂಟರ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ನಿರಂಜನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆಯನ್ನು ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಅನಾವರಣಗೊಳಿಸಿ ಶುಭ ಕೋರಿದರು.

ವಿನಯ್ ಕೃಷ್ಣ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೀಜರ್ ಚಿತ್ರವನ್ನು ನಿರ್ದೇಶಿಸಿದ್ದ, ವಿನಯ್ ಕೃಷ್ಣ ಅವರಿಗೆ ಇದು ಎರಡನೇ ಚಿತ್ರ. ತ್ರಿವಿಕ್ರಮ ಸಾಫಲ್ಯ ಅವರು ನಿರ್ಮಿಸುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಸಿನಿಮಾ ಆಗುವ ಸೂಚನೆಗಳಿವೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಂದನ್ ಶೆಟ್ಟಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆಯುತ್ತಿದ್ದಾರೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ಅಂತ್ಯದ ವೇಳೆಗೆ ಶುರುವಾಗಲಿದೆ.

ಕೇರಳದ ಸೌಮ್ಯಾ ಮೆನನ್ ನಿರಂಜನ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT