ಭಾನುವಾರ, ಜನವರಿ 26, 2020
28 °C

ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸುವ ಜಲ್ಲಾದ್‌ಗೆ ಜಗ್ಗೇಶರಿಂದ ₹1 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಲಿರುವ ಪವನ್ ಜಲ್ಲಾದ್ ಅವರಿಗೆ ₹ 1 ಲಕ್ಷ ದೇಣಿಗೆ ನೀಡುವುದಾಗಿ ನಟ ಜಗ್ಗೇಶ್‌ ಹೇಳಿದ್ದಾರೆ. 

ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳನ್ನು ಇದೇ 22ರಂದು ಗಲ್ಲಿಗೇರಿಸುವಂತೆ ಕೋರ್ಟ್ ಆದೇಶಿಸಿದ್ದು ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯು ಅಪರಾಧಿಗಳನ್ನು ಗಲ್ಲಿಗೇರಿಸುವ ಹೊಣೆಯನ್ನು 57 ವರ್ಷದ ಪವನ್ ಜಲ್ಲಾದ್​ಗೆ ವಹಿಸಲಾಗಿದೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪವನ್‌ ಜಲ್ಲಾದ್​, ನಾನು ಅಪರಾಧಿಗಳನ್ನು ಗಲ್ಲಿಗೇರಿಸಲು ಸಿದ್ಧವಾಗಿದ್ದೇನೆ. ಇದು ನನ್ನ ಮಗಳ ಮದುವೆಗೆ ಹಣ ಹೊಂದಿಸುವುದಕ್ಕಾಗಿ ದೇವರು ಕೊಟ್ಟ ಅವಕಾಶ ಎಂದು ಭಾವಿಸುತ್ತೇನೆ ಎಂದು ಹೇಳಿದ್ದರು.

ಪವನ್‌ ಜಲ್ಲಾದ್​ ಅವರ ಭಾವುಕ ಪ್ರತಿಕ್ರಿಯೆಗೆ ಟ್ವೀಟ್ ಮಾಡಿರುವ ನಟ ಜಗ್ಗೇಶ್‌ ನೀವು ಅಪರಾಧಿಗಳನ್ನು ಗಲ್ಲಿಗೇರಿಸಿದರೆ ₹1 ಲಕ್ಷ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು