ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊನೆಯ ಹಂತದಲ್ಲಿ ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರೀಕರಣ

Published 15 ಮಾರ್ಚ್ 2024, 0:30 IST
Last Updated 15 ಮಾರ್ಚ್ 2024, 0:30 IST
ಅಕ್ಷರ ಗಾತ್ರ

ಶಿವರಾಜ್‌ಕುಮಾರ್‌ ಅವರ ಪುತ್ರಿ ನಿವೇದಿತಾ ನಿರ್ಮಾಣದ ಚೊಚ್ಚಲ ಸಿನಿಮಾ ‘ಫೈರ್ ಫ್ಲೈ’ ಚಿತ್ರೀಕರಣ ಕೊನೆಯ ಹಂತ ತಲುಪಿದೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ನಿರ್ಮಿಸಿರುವ ಈ ಚಿತ್ರವನ್ನು ವಂಶಿ ನಿರ್ದೇಶಿಸಿ, ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.‌

‘ದೀಪಾವಳಿಗೆ ಚಿತ್ರ ತೆರೆಗೆ ಬರಲಿದೆ. ವೆಬ್ ಸೀರಿಸ್ ಮಾಡಿದ‌ ಮೇಲೆ ಸಿನಿಮಾ ಮಾಡಲು ತುಂಬಾ ಆಸಕ್ತಿ ಇತ್ತು. ವಂಶಿ ಅವರು ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಕಥೆ ತುಂಬಾ ಸರಳವಾಗಿದ್ದರೂ, ಅವರು ಕಥೆ ಹೇಳಿದ ರೀತಿ ತುಂಬಾ ಇಷ್ಟವಾಯ್ತು. ಹೊಸ ಪ್ರಯೋಗ ಮಾಡಿದ್ದೇವೆ’ ಎಂದರು ನಿವೇದಿತಾ ಶಿವರಾಜ್‌ಕುಮಾರ್‌.

‘ಎಲ್ಲರ ಜೀವನದಲ್ಲಿಯೂ ಒಂದು ಪಾಯಿಂಟ್ ಇರುತ್ತದೆ. ನಾವು ಡೆಡ್‌ ಎಂಡ್ ಅಂದುಕೊಂಡಿರುತ್ತೇವೆ. ಒಂದು ಭರವಸೆ ಹಾಗೂ ಸ್ಫೂರ್ತಿಗೆ ಕಾಯುತ್ತಾ ಇರುತ್ತೇವೆ. ಆ ಸಮಯದಲ್ಲಿ ಭರವಸೆಯ ಎಂಬ ಬೆಳಕು ಎಲ್ಲಿಂದಲೋ ಬರುವುದಲ್ಲ, ನಮ್ಮಿಂದಲೇ ಬರಬೇಕು ಎಂಬುದೇ ಫೈರ್ ಫ್ಲೈ’ ಎಂದು ನಿರ್ದೇಶಕ ವಂಶಿ ತಿಳಿಸಿದರು.

ಅಭಿಲಾಷ್ ಕಳತ್ತಿ ಛಾಯಾಚಿತ್ರಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT