ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ಳಿತೆರೆಯಲ್ಲೂ ಚಂದನ್ ಶೆಟ್ಟಿ-ನಿವೇದಿತಾ ಜೋಡಿ! ಸೈಕೋಥ್ರಿಲ್ಲರ್ ಚಿತ್ರ

ಪುನೀತ್ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ
Published 12 ಡಿಸೆಂಬರ್ 2023, 19:15 IST
Last Updated 12 ಡಿಸೆಂಬರ್ 2023, 19:15 IST
ಅಕ್ಷರ ಗಾತ್ರ

ರಿಯಲ್‌ ಲೈಫ್‌ನಲ್ಲಿ ಈಗಾಗಲೇ ಜೋಡಿಯಾಗಿರುವ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಂಪತಿ ಇದೀಗ ರೀಲ್‌ನಲ್ಲಿಯೂ ಜೊತೆಯಾಗುತ್ತಿದ್ದಾರೆ. ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ನಂದಕಿಶೋರ್ ಜೊತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿರುವ ಪುನೀತ್ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. 

‘ಹನ್ನೆರಡು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ‘ಅಧ್ಯಕ್ಷ’ದಿಂದ ಹಿಡಿದು ಅನೇಕ ಸಿನಿಮಾಗಳಿಗೆ ಸಹಾಯಕ, ಸಹ ನಿರ್ದೇಶಕನಾಗಿ ಕೆಲಸ ಮಾಡಿರುವೆ. ಇದೀಗ ನನ್ನದೇ ಸ್ವಂತ ಕಥೆ, ಚಿತ್ರಕಥೆಯೊಂದಿಗೆ ನಿರ್ದೇಶನಕ್ಕೆ ಇಳಿದಿರುವೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಮಹೂರ್ತದ ದಿನಾಂಕವನ್ನು ಪ್ರಕಟಿಸಲಾಗುವುದು’ ಎಂದಿದ್ದಾರೆ ನಿರ್ದೇಶಕ ಪುನೀತ್‌.

ಚೌಡೇಶ್ವರಿ ಸಿನಿ ಕ್ರಿಯೇಶನ್ಸ್ ಮೂಲಕ ಎಲ್.ಮೋಹನ್ ಕುಮಾರ್ ಅವರು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಎಂ.ಎಸ್.ತ್ಯಾಗರಾಜ್ ಅವರ ಸಂಗೀತ ಸಂಯೋಜನೆ, ಕರುಣಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT