ನವೀನ್ ಶಂಕರ್ ನಟನೆಯ, ಕುಲದೀಪ್ ಕಾರಿಯಪ್ಪ ನಿರ್ದೇಶನದ ‘ನೋಡಿದವರು ಏನಂತಾರೆ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಜ.31ರಂದು ಈ ಸಿನಿಮಾ ರಿಲೀಸ್ ಆಗಲಿದೆ.

‘ಕ್ಷೇತ್ರಪತಿ’, ‘ಗುರುದೇವ ಹೊಯ್ಸಳ’ ಸಿನಿಮಾದ ಬಳಿಕ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ನವೀನ್ ಶಂಕರ್ ಕೈಯಲ್ಲಿ ಹಲವು ಪ್ರಾಜೆಕ್ಟ್ಗಳಿವೆ. ಶಿವರಾಜ್ಕುಮಾರ್ ನಟನೆಯ 131ನೇ ಸಿನಿಮಾದಲ್ಲೂ ನವೀನ್ ಬಣ್ಣಹಚ್ಚಿದ್ದಾರೆ. ‘ನೋಡಿದವರು ಏನಂತಾರೆ’ ಸಿನಿಮಾದಲ್ಲಿ ‘ಸಿದ್ಧಾರ್ಥ್ ದೇವಯ್ಯ’ ಎಂಬ ಪಾತ್ರದ ಮುಖಾಂತರ ನವೀನ್ ಪ್ರೇಕ್ಷಕರೆದುರಿಗೆ ಬರಲಿದ್ದಾರೆ. ಭಿನ್ನವಾದ ಭಾವನಾತ್ಮಕ ಕಥೆಯೊಂದನ್ನು ಕುಲದೀಪ್ ತೆರೆ ಮೇಲೆ ತರುತ್ತಿದ್ದಾರೆ ಎನ್ನುವುದನ್ನು ಟೀಸರ್ ಅನಾವರಣಗೊಳಿಸಿದೆ. ಹಿಂದಿನ ಸಿನಿಮಾಗಳಿಗಿಂತಲೂ ವಿಭಿನ್ನ ಪಾತ್ರದಲ್ಲಿ ನವೀನ್ ಇಲ್ಲಿದ್ದಾರೆ. ಈ ಚಿತ್ರವನ್ನು ನಾಗೇಶ್ ಗೋಪಾಲ್ ನಿರ್ಮಾಣ ಮಾಡಿದ್ದಾರೆ. ಅಪೂರ್ವ ಭಾರದ್ವಾಜ್ ನಾಯಕಿಯಾಗಿ ನಟಿಸಿದ್ದಾರೆ. ಮಯೂರೆಶ್ ಅಧಿಕಾರಿ ಸಂಗೀತ ಸಂಯೋಜನೆ, ಅಶ್ವಿನ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಕುಲದೀಪ್ ಬರೆದ ಕಥೆ ಮತ್ತು ಚಿತ್ರಕಥೆಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್ ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.