ಬೆಂಗಳೂರು: ಕಾಪಿರೈಟ್ ಉಲ್ಲಂಘಿಸಿ ‘ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಹಾಡು ಬಳಸಿದ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗದ ನಟ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಲಹರಿ ಆಡಿಯೋ ಸಂಸ್ಥೆ ಕಾಪಿ ರೈಟ್ ಕಾಯ್ದೆ ಅಡಿ ರಕ್ಷಿತ್ ಶೆಟ್ಟಿ , ಪರಮವ್ಹಾಸ್ಟುಡಿಯೋ ಪ್ರೈವೇಟ್
ಲಿಮಿಟೆಡ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನಗರದ 9ನೇ ಎಸಿಎಂಎಂ ಕೋರ್ಟ್ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ಆರೋಪಿಗಳು ನ್ಯಾಯಾಲಯಕ್ಕೆ ನಿರಂತರ ಗೈರು ಹಾಜರಾದ ಹಿನ್ನಲೆಯಲ್ಲಿ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

ಪ್ರಕರಣದ ಹಿನ್ನೆಲೆ: 2016ರ ಡಿಸೆಂಬರ್ 30ರಂದು ಬಿಡುಗಡೆ ಆದ ಕಿರಿಕ್ ಪಾರ್ಟಿ ಚಿತ್ರದಲ್ಲಿ ಹೇಯ್ ಹೂ ಆರ್ ಯೂ (Hey who are you) ಹಾಡನ್ನು ಲಹರಿ ಸಂಸ್ಥೆಯ ಅನುಮತಿ ಇಲ್ಲದೆ ಬಳಸಲಾಗಿತ್ತು.

‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಚಿತ್ರದಲ್ಲಿ ಬಳಸಿಕೊಂಡಿದ್ದರಿಂದ ಲಹರಿ ಸಂಸ್ಥೆ 2017ರ ಜನವರಿ 11ರಂದು ದೂರು ದಾಖಲಿಸಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.