ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದ, ಕೆ ಸೂರಜ್ ಶೆಟ್ಟಿ ನಿರ್ದೇಶನದ ‘ನಾನ್ವೆಜ್’ ತುಳು ಸಿನಿಮಾ ಫೆಬ್ರುವರಿ 6ರಂದು ತೆರೆ ಕಾಣಲಿದೆ.

‘ಸು ಫ್ರಂ ಸೋ’ ಸಿನಿಮಾದಲ್ಲಿ ನಟಿಸಿರುವ ಹೆಚ್ಚಿನ ಕಲಾವಿದರು ‘ನಾನ್ವೆಜ್’ ಸಿನಿಮಾದಲ್ಲಿ ಇದ್ದಾರೆ. ಪ್ರಕಾಶ್ ತೂಮಿನಾಡು, ‘ಬಂದರೊ ಬಂದರು ಭಾವ ಬಂದರು’ ಖ್ಯಾತಿಯ ಪುಷ್ಪರಾಜ್ ಬೊಳ್ಳೂರು, ದೀಪಕ್ ರೈ ಪಾಣಾಜೆ, ಮೈಮ್ ರಾಮದಾಸ್, ವಿಸ್ಮಯ ವಿನಾಯಕ್, ರೂಪಾ ವರ್ಕಾಡಿ, ನಾಯಕಿಯಾಗಿ ಸಂಜನಾ ಬುರ್ಲಿ, ನಾಯಕನಾಗಿ ಅಥರ್ವ ಪ್ರಕಾಶ್ ನಟಿಸಿದ್ದಾರೆ. ನವೀನ್ ಡಿ. ಪಡೀಲ್ ಪ್ರಮುಖ ಪಾತ್ರದಲ್ಲಿದ್ದಾರೆ.

ಪ್ರೀತಿಯ ಹಿಂದೆ ಹೋಗಿರುವ ಮುಗ್ಧ ಯುವಕನೊಬ್ಬನ ಸುತ್ತ ಹೆಣೆದಿರುವ ಕಥೆ ಇದಾಗಿದ್ದು, ಯುವ ಸಮುದಾಯಕ್ಕೆ ಹೆಚ್ಚು ಆಪ್ತವಾಗಲಿದೆ. ಇಡೀ ಸಿನಿಮಾದ ಕಥೆ ಹಾಗೂ ಸಂದೇಶವನ್ನು ಹಾಸ್ಯದಲ್ಲೇ ಮುಂದುವರಿಯುವುದು ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಸಿನಿಮಾ ತಂಡ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.