ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಹಣ ವರ್ಗಾವಣೆ: ಜಾಕ್ವೆಲಿನ್ ಫರ್ನಾಂಡಿಸ್, ನೋರಾ ಫತೇಹಿಗೆ ಇ.ಡಿ ಸಮನ್ಸ್‌

Last Updated 14 ಅಕ್ಟೋಬರ್ 2021, 10:41 IST
ಅಕ್ಷರ ಗಾತ್ರ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಸಮನ್ಸ್‌ ನೀಡಿದೆ.

₹ 200 ಕೋಟಿ ಹಣ ವಂಚನೆ ಪ್ರಕರಣದಲ್ಲಿ ಶ್ರೀಲಂಕಾ ಮೂಲದ ಜಾಕ್ವೆಲಿನ್‌ ಮತ್ತು ಕೆನಡಾ ಮೂಲದ ನೂರಾ ಫತೇಹಿ ಅವರ ಹೆಸರು ಕೇಳಿಬಂದಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಫರ್ನಾಂಡಿಸ್ ಅವರ ವಿಚಾರಣೆಯನ್ನು ಇ.ಡಿ ನಡೆಸಿತ್ತು. 29 ವರ್ಷದ ನಟಿ ಹಾಗೂ ನೃತ್ಯಗಾರ್ತಿ ನೂರಾ ಫತೇಹಿ ಅವರು ಸಹ ಇ.ಡಿ ವಿಚಾರಣೆಗೆ ಒಳಪಟ್ಟಿದ್ದಾರೆ.

ಹಣ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT