ಸೋಮವಾರ, ಜುಲೈ 4, 2022
22 °C

ಆಲಿಯಾ ಭಟ್ ಜಾಗಕ್ಕೆ ರಶ್ಮಿಕಾ: ಎನ್‌ಟಿಆರ್‌ಗೆ ಜೋಡಿಯಾಗಲಿರುವ ಕೊಡಗಿನ ಕುವರಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೆಲುಗು ನಟ ಜ್ಯೂನಿಯರ್‌ ಎನ್‌ಟಿಆರ್ ಅಭಿನಯದ ಬಹುನಿರೀಕ್ಷಿತ ಚಿತ್ರದಲ್ಲಿ ‘ನ್ಯಾಷನಲ್‌ ಕ್ರಷ್‌’ ರಶ್ಮಿಕಾ ಮಂದಣ್ಣ ಅಭಿನಯಿಸಲಿದ್ದಾರೆ ಎಂಬ ಮಾತುಗಳು ಟಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿವೆ. 

ಇತ್ತೀಚೆಗೆ ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಎನ್‌ಟಿಆರ್‌ –ರಾಮ್‌ ಚರಣ್‌ ಅಭಿನಯದ ‘ಆರ್‌ಆರ್‌ಆರ್‌’ ಸಿನಿಮಾ ವಿಶ್ವದಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಓದಿ... ಡಾ.ರಾಜ್‌ಕುಮಾರ್ ಜನ್ಮದಿನ: ಬೊಮ್ಮಾಯಿ, ಸಿದ್ದರಾಮಯ್ಯ ಸೇರಿ ಗಣ್ಯರಿಂದ ಶುಭಾಶಯ

‘ಆರ್‌ಆರ್‌ಆರ್‌’ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಎನ್‌ಟಿಆರ್‌, ಕೊರಟಾಲ ಶಿವ ನಿರ್ದೇಶನದ ಹೊಸ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. 

ಈ ಚಿತ್ರದಲ್ಲಿ ಎನ್‌ಟಿಆರ್‌ಗೆ ನಾಯಕಿಯಾಗಿ ಬಾಲಿವುಡ್‌ ಬೆಡಗಿ ಆಲಿಯಾ ಭಟ್‌ ನಟಿಸಬೇಕಿತ್ತು. ಆದರೆ, ಕಾರಣಾಂತರಗಳಿಂದ ಅವರು ಅಭಿನಯಿಸುತ್ತಿಲ್ಲ. ಅವರ ಬದಲಿಗೆ ರಶ್ಮಿಕಾ ಮಂದಣ್ಣ ಅಭಿನಯಿಸಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. 

ಓದಿ...​ PHOTOS | 94ನೇ ಜನ್ಮದಿನ ಸಂಭ್ರಮ: ಅಪರೂಪ ಚಿತ್ರಗಳಲ್ಲಿ ಕರ್ನಾಟಕ ರತ್ನ ಡಾ. ರಾಜ್‌ಕುಮಾರ್

ಇತ್ತೀಚೆಗೆ ತೆರೆಕಂಡಿದ್ದ ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್‌ –ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ’ ಸಿನಿಮಾ ಯಶಸ್ಸು ಗಳಿಸಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸಖತ್‌ ಸದ್ದು ಮಾಡಿತ್ತು.

ಇವನ್ನೂ ಓದಿ...

 ಬ್ರೇಕಪ್ ವದಂತಿ: ಸಿಂಗಲ್‌ ಫೋಟೊ ಹಂಚಿಕೊಂಡ ಸಿದ್ಧಾರ್ಥ್ -ಕಿಯಾರಾ ಜೋಡಿ

49ನೇ ವಸಂತಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್: ಅಭಿಮಾನಿಗಳಿಂದ ಶುಭ ಹಾರೈಕೆ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು