ಬುಧವಾರ, ಜೂನ್ 3, 2020
27 °C

ಲಾಕ್‌ಡೌನ್ | ನೌಕರರಿಗೆ ಜೂ.ಎನ್‌ಟಿಆರ್ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾರತೀಯ ಚಿತ್ರರಂಗದ ಅನೇಕ ಗಣ್ಯರು, ನಟ–ನಟಿಯರು ಕೋರೊನಾ ಲಾಕ್‌ಡೌನ್‌ ಅವಧಿಯಲ್ಲಿ ಸಂಕಷ್ಟ ಎದುರಿಸುತ್ತಿರುವವರಿಗೆ ನೆರವಾಗುತ್ತಿದ್ದಾರೆ.

ಟಾಲಿವುಡ್‌ನ ಖ್ಯಾತ ನಟ ಜ್ಯೂನಿಯರ್‌ ಎನ್‌ಟಿಆರ್, ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟು, ತಮ್ಮ ಮನೆ ಮತ್ತು ಕಚೇರಿಯಲ್ಲಿ ಕೆಲಸ ಮಾಡುವ ಎಲ್ಲ ನೌಕರರಿಗೂ ಒಂದು ತಿಂಗಳ ಮುಂಗಡ ಸಂಬಳ ನೀಡಿದ್ದಾರೆ. ‘ಇನ್ನೂ ಹಣಕಾಸಿನ ನೆರವು ಬೇಕಾದರೆ ಕೇಳಿ’ ಎಂದು ತಿಳಿಸಿದ್ದಾರಂತೆ.

ಈ ನೌಕರರಿಗೆ ಬರೀ ಮುಂಗಡ ವೇತನವಷ್ಟೇ ಅಲ್ಲ, ವೇತನ ಸಹಿತ ರಜೆಯನ್ನೂ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ಹಣಕಾಸಿನ ಅಗತ್ಯಬಿದ್ದರೆ, ಹಿಂಜರಿಕೆ ಮಾಡದೇ ತಮ್ಮನ್ನು ಸಂಪರ್ಕಿಸುವಂತೆ ತಿಳಿಸಿದ್ದಾರಂತೆ. ನೌಕರರಿಗಷ್ಟೇ ಅಲ್ಲ, ತಮ್ಮ ಮನೆಯ ಸುತ್ತಮುತ್ತಲಿರುವ ಪರಿಚಿತರ ಸಂಕಷ್ಟಕ್ಕೂ ಸ್ಪಂದಿಸುತ್ತಿರುವುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ.

ಕೊರೊನಾ ರಿಲೀಫ್‌ ಫಂಡ್‌ಗೆ ಜ್ಯೂ. ಎನ್‌ಟಿಆರ್‌ ₹75 ಲಕ್ಷ ದೇಣಿಗೆ ನೀಡಿದ್ದಾರೆ. ಇದರಲ್ಲಿ ಆಂಧ್ರಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ ₹25 ಲಕ್ಷ ಹಾಗೂ ತೆಲುಗು ಸಿನಿಮಾ ಇಂಡಸ್ಟ್ರಿಗೆ ₹25 ಲಕ್ಷ ನೀಡಿದ್ದಾರೆ.

ಲಾಕ್‌ಡೌನ್ ಅವಧಿಯಲ್ಲಿ ತಮ್ಮ ಮಕ್ಕಳಾದ ಭಯ್‌ ಮತ್ತು ಭಾರ್ಗವ್ ಜತೆ ಕಾಲ ಕಳೆಯುತ್ತಲೇ ಇಂಥ ಸಾಮಾಜಿಕ ಕಾರ್ಯಗಳಿಗೆ ನೆರವಾಗುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು