ಸೋಮವಾರ, ಜೂನ್ 14, 2021
27 °C

ಜೂನಿಯರ್‌ ಎನ್‌ಟಿಆರ್‌ಗೆ ಕೋವಿಡ್‌ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೆಲುಗು ನಟ ಜೂನಿಯರ್‌ ಎನ್‌ಟಿಆರ್‌ ಅವರು ಕೋವಿಡ್‌ ಸೋಂಕಿಗೆ ತುತ್ತಾಗಿದ್ದಾರೆ.

ತಮಗೆ ಸೋಂಕು ತಗುಲಿರುವ ಬಗ್ಗೆ  ಟ್ವೀಟ್‌ ಮೂಲಕ ಹೇಳಿರುವ ನಟ, ನನ್ನ ಕೋವಿಡ್‌ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿದೆ. ಆದರೆ ಯಾರೂ ಆತಂಕಪಡುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ನಾನು ಮತ್ತು ನನ್ನ ಕುಟುಂಬದವರು ಮನೆಯೊಳಗೆ ಕ್ವಾರಂಟೈನ್‌ ಆಗಿದ್ದೇವೆ. ಚಿಕಿತ್ಸೆ ಪಡೆಯುತ್ತಿದ್ದೇವೆ. ಇತ್ತೀಚೆಗೆ ನಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಎಚ್ಚರ ವಹಿಸಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗೆ ನೀಡಿದ ಕನ್ನಡದಲ್ಲಿ ನೀಡಿದ ವಿಡಿಯೋ ಸಂದೇಶದಲ್ಲಿ, ‘ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ದೊಡ್ಡ ಅಸ್ತ್ರ. ಸದಾ ಮಾಸ್ಕ್‌ ಧರಿಸಿ, ಕೈ ಸ್ವಚ್ಛವಾಗಿಟ್ಟುಕೊಳ್ಳಿ, ಓಡಾಡುವಾಗ ಅಂತರ ಕಾಯ್ದುಕೊಳ್ಳಿ, ವ್ಯಾಕ್ಸೀನ್‌ ಹಾಕಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿ’ ಎಂದು ಹೇಳಿದ್ದರು.

ಅಂದಹಾಗೆ ಅವರು ಪ್ರಧಾನ ಭೂಮಿಕೆಯಲ್ಲಿರುವ ಚಿತ್ರ ಆರ್‌ಆರ್‌ಆರ್‌ ಬಿಡುಗಡೆಯನ್ನು ಮುಂದಿನ ವರ್ಷಕ್ಕೆ (2022) ಮುಂದೂಡಲಾಗಿದೆಯಂತೆ.

ಟ್ವೀಟ್‌ ಓದಲು ಲಿಂಕ್‌: https://twitter.com/tarak9999/status/1391686192760987651

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು