‘ನ್ಯೂರಾನ್‌’ ಭರದ ಚಿತ್ರೀಕರಣ

7

‘ನ್ಯೂರಾನ್‌’ ಭರದ ಚಿತ್ರೀಕರಣ

Published:
Updated:

ಫ್ರೆಂಡ್ಸ್‌ ಪ್ರೊಡಕ್ಷನ್ ಲಾಂಛನದಲ್ಲಿ ವಿನಯ್‌ಕುಮಾರ್ ಹಾಗೂ ಭರಣಿ ನಿರ್ಮಿಸುತ್ತಿರುವ ‘ನ್ಯೂರಾನ್’ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಪೂರ್ಣವಾಗಿದೆ.

ಬಾಕಿಯಿರುವ ಒಂದು ಹಾಡಿನ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. ಸಕಲೇಶಪುರ, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಕಾಸ್ ಪುಷ್ಪಗಿರಿ ಚಿತ್ರಕಥೆ ಬರೆದು, ಚೊಚ್ಚಲ ನಿರ್ದೇಶನ ಮಾಡಿದ್ದಾರೆ.

ಯುವ, ಈ ಚಿತ್ರದ ಮೂಲಕ ನಾಯಕನಟನಾಗಿ ಪರಿಚಯವಾಗುತ್ತಿದ್ದಾರೆ. ನೇಹಾ ಪಾಟೀಲ್ ನಾಯಕಿ. ವೈಷ್ಣವಿ ಮೆನನ್, ಜೈಜಗದೀಶ್, ಶಿಲ್ಪಾ ಶೆಟ್ಟಿ, ವರ್ಷ, ಅರವಿಂದ್ ರಾವ್, ಕಬೀರ್ ಸಿಂಗ್(ಬಾಂಬೆ), ರಾಕ್‌ಲೈನ್ ಸುಧಾಕರ್, ಕಾರ್ತಿಕ್ ಪ್ರಮುಖ ತಾರಾಬಳಗದಲ್ಲಿದ್ದಾರೆ.

ಗುರುಕಿರಣ್ ಸಂಗೀತ ನಿರ್ದೇಶನ ನೀಡಿದ್ದು, ಹೈದರಾಬಾದ್‌ನ ಶೋಯಬ್ ಅಹಮದ್ ಛಾಯಾಗ್ರಹಣ,ಶ್ರೀಧರ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನವಿದೆ. ಡಾ.ವಿ.ನಾಗೇಂದ್ರ ಪ್ರಸಾದ್ ಹಾಡು,ಶ್ರೀಹರ್ಷ ಸಂಭಾಷಣೆ ಬರೆದಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !