ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Cinema News: ಏ.19ಕ್ಕೆ ‘O2’ ಸಿನಿಮಾ ರಿಲೀಸ್‌

Published 2 ಏಪ್ರಿಲ್ 2024, 18:34 IST
Last Updated 2 ಏಪ್ರಿಲ್ 2024, 18:34 IST
ಅಕ್ಷರ ಗಾತ್ರ

ಪಿಆರ್‌ಕೆ ಪ್ರೊಡಕ್ಷನ್ಸ್‌ ನಿರ್ಮಾಣದ, ಆಶಿಕಾ ರಂಗನಾಥ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘O2’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. 

ರಾಘವ್ ನಾಯಕ್ ಹಾಗೂ ಪ್ರಶಾಂತ್ ರಾಜ್ ರಚಿಸಿ, ನಿರ್ದೇಶಿಸಿರುವ ಈ ಸಿನಿಮಾ ಏ.19ರಂದು ತೆರೆಕಾಣುತ್ತಿದೆ. ಮೆಡಿಕಲ್ ಥ್ರಿಲ್ಲರ್‌ ಜಾನರ್‌ನ ಈ ಸಿನಿಮಾದ ಕಥೆಯು ಕೇವಲ‌ ಥ್ರಿಲ್ಲರ್ ಅಂಶಗಳನ್ನಷ್ಟೇ ಅಲ್ಲದೆ ಲವ್‌ಸ್ಟೋರಿಯನ್ನೂ ಒಳಗೊಂಡಿದೆ. ಹೀಗಾಗಿ ಈ ಚಿತ್ರವನ್ನು ‘ಲವ್ ಥ್ರಿಲ್ಲರ್’ ಎಂದು ಪರಿಗಣಿಸಬಹುದು ಎಂದಿದೆ ಚಿತ್ರತಂಡ. ಪಿಆರ್‌ಕೆ ಬ್ಯಾನರ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ನಿರ್ಮಾಣದ ಹತ್ತನೇ ಚಿತ್ರ ಇದಾಗಿದೆ. ಪ್ರವೀಣ್ ತೇಜ್, ರಾಘವ್ ನಾಯಕ್, ಸಿರಿ ರವಿಕುಮಾರ್, ಪ್ರಕಾಶ್ ಬೆಳವಾಡಿ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. 

ಭಿನ್ನ ಕಥಾಹಂದರ ಚಿತ್ರ ಇದಾಗಿದೆ. ಸಾಯುತ್ತಿರುವವರನ್ನು ಬದುಕಿಸುವುದೇ ವೈದ್ಯರ ಆದ್ಯ ಕರ್ತವ್ಯ ಎಂದು ನಂಬುವ ‘ಶ್ರದ್ಧಾ’ (ಆಶಿಕಾ ರಂಗನಾಥ್), ಸಂಶೋಧನೆ ನಡೆಸಿ ‘O2’ ಎಂಬ ಔಷಧದ ಮೂಲಕ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರನ್ನು ಬದುಕಿಸುವ ಪ್ರಯತ್ನಕ್ಕೆ ಮುಂದಾಗುತ್ತಾಳೆ. ಎಲ್ಲಾ ಅಡೆತಡೆಗಳನ್ನು ಮೀರಿ ಗುರಿ ತಲುಪಲು ಶ್ರದ್ಧಾಳಿಗೆ ಸಾಧ್ಯವೇ ಎನ್ನುವುದು ಚಿತ್ರದ ಕಥೆ ಎಂದು ವಿವರಿಸಿದೆ ಚಿತ್ರತಂಡ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT