ಶನಿವಾರ, ಜನವರಿ 18, 2020
19 °C

ಥಿಯೇಟರ್‌ಗೆ ಲಗ್ಗೆ ಇಟ್ಟ ಒಡೆಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಿರ್ದೇಶಕ ಎಂ.ಡಿ. ಶ್ರೀಧರ್‌ ಮತ್ತು ದರ್ಶನ್‌ ಕಾಂಬಿನೇಷನ್‌ನಡಿ ನಿರ್ಮಾಣಗೊಂಡಿರುವ ಮೂರನೇ ಚಿತ್ರ ‘ಒಡೆಯ’. ಇದು ತಮಿಳಿನ ‘ವೀರಂ’ ಚಿತ್ರದ ರಿಮೇಕ್‌. ಈ ಹಿಂದೆ ಶ್ರೀಧರ್‌ ಅವರು ದರ್ಶನ್‌ಗೆ ‘ಪೊರ್ಕಿ’ ಮತ್ತು ‘ಬುಲ್‌ಬುಲ್‌’ ಚಿತ್ರ ನಿರ್ದೇಶಿಸಿದ್ದರು. 

ಈ ಚಿತ್ರದಲ್ಲಿ ದರ್ಶನ್‌ ಅವರದು ಗಜೇಂದ್ರನ ಪಾತ್ರವಂತೆ. ಐವರು ಸಹೋದರರ ಪ್ರೀತಿಯ ಅಣ್ಣನ ಕಥೆ ಇದರಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಸಂದೇಶ್‌ ಪ್ರೊಡಕ್ಷನ್‌ ಲಾಂಛನದಡಿ ಎನ್. ಸಂದೇಶ್‌ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಅಬ್ಬರಿಸಿದ ಒಡೆಯ: ಸಿದ್ಧಭಿತ್ತಿಯ ಮೇಲೆ ದರ್ಶನ್ ಕತ್ತಿ

ಚಿತ್ರಕ್ಕೆ ಸಂಗೀತ ಸಂಯೋಜಿಸಿರುವುದು ಅರ್ಜುನ್‌ ಜನ್ಯ. ಜಯಂತ ಕಾಯ್ಕಿಣಿ, ವಿ. ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಚೇತನ್ ಕುಮಾರ್‌ ಗೀತ ರಚನೆ ಮಾಡಿದ್ದಾರೆ. ಎ.ವಿ. ಕೃಷ್ಣಕುಮಾರ್‌ (ಕೆ.ಕೆ.) ಅವರ ಛಾಯಾಗ್ರಹಣವಿದೆ. ಕೆ.ಎಂ. ಪ್ರಕಾಶ್‌ ಅವರ ಸಂಕಲನವಿದೆ. ಕಲೈ ನೃತ್ಯ ನಿರ್ದೇಶನ ಮಾಡಿದ್ದಾರೆ. ವಿಜಯ್ ಅವರ ಸಾಹಸ ನಿರ್ದೇಶನವಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ. ಕೊಡಗಿನ ಬೆಡಗಿ ಸನ ತಿಮ್ಮಯ್ಯ ಈ ಚಿತ್ರದ ನಾಯಕಿ. ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ತಾರಾಗಣದಲ್ಲಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು