ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದರ್ಶನ್‌ ನಟನೆಯ ‘ಒಡೆಯ’ 700 ಥಿಯೇಟರ್‌ಗಳಲ್ಲಿ ತೆರೆಗೆ

Last Updated 23 ನವೆಂಬರ್ 2019, 12:13 IST
ಅಕ್ಷರ ಗಾತ್ರ

‘ಚಾಲೆಂಜಿಂಗ್‌ ಸ್ಟಾರ್‌’ ದರ್ಶನ್‌ ನಟನೆಯ ‘ಒಡೆಯ’ ಚಿತ್ರಕ್ಕೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯು/ಎ ಪ್ರಮಾಣ ಪತ್ರ ನೀಡಿದೆ. ಡಿಸೆಂಬರ್‌ 12ರಂದು ದೇಶದಾದ್ಯಂತ ಏಕಕಾಲಕ್ಕೆ 700ಕ್ಕೂ ಹೆಚ್ಚು ಥಿಯೇಟರ್‌ಗಳಿಗೆ ‘ಒಡೆಯ’ ಲಗ್ಗೆ ಇಡಲು ಸಜ್ಜಾಗಿದ್ದಾನೆ.

ದಚ್ಚು ನಟನೆಯ 50ನೇ ಚಿತ್ರ ‘ಮುನಿರತ್ನ ಕುರುಕ್ಷೇತ್ರ’ದ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸಿನಿಮಾ ಇದಾಗಿದೆ. ಹಾಗಾಗಿ, ದರ್ಶನ್‌ ಅಭಿಮಾನಿಗಳಲ್ಲಿ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ. ಇದು ತಮಿಳಿನ ‘ವೀರಂ’ ಚಿತ್ರದ ಕನ್ನಡ ಅವತರಣಿಕೆ. ಚಿತ್ರದಲ್ಲಿ ಐವರು ಸಹೋದರರ ಪ್ರೀತಿಯ ಅಣ್ಣನ ಕಥೆ ಹೆಣೆಯಲಾಗಿದೆ. ದರ್ಶನ್‌ ಅವರ ಪಾತ್ರದ ಹೆಸರು ಗಜೇಂದ್ರ. ತಮಿಳಿನಲ್ಲಿ ಅಜಿತ್‌ ನಿರ್ವಹಿಸಿದ್ದ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

‘ಒಡೆಯ’ ಚಿತ್ರದಲ್ಲಿ ದರ್ಶನ್
‘ಒಡೆಯ’ ಚಿತ್ರದಲ್ಲಿ ದರ್ಶನ್

ಈ ಚಿತ್ರಕ್ಕೆ ಎಂ.ಡಿ. ಶ್ರೀಧರ್‌ ಆ್ಯಕ್ಷನ್‌ ಕಟ್‌ ಹೇಳಿದ್ದು, ಸಂದೇಶ್‌ ಪ್ರೊಡಕ್ಷನ್‌ನಡಿ ಎನ್‌. ಸಂದೇಶ್‌ ಬಂಡವಾಳ ಹೂಡಿದ್ದಾರೆ. ಡಿಸೆಂಬರ್‌ 1ರಂದು ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.

ಬೆಂಗಳೂರು, ಹೈದರಾಬಾದ್, ಮೈಸೂರು ಮತ್ತು ಚಿತ್ರದುರ್ಗದ ಸುತ್ತಮುತ್ತದ ಈ ಚಿತ್ರದ ಶೂಟಿಂಗ್‌ ನಡೆಸಲಾಗಿದೆ. ಕೊಡಗಿನ ಬೆಡಗಿ ಸನ ತಿಮ್ಮಯ್ಯ ದರ್ಶನ್‌ ಅವರಿಗೆ ಜೋಡಿಯಾಗಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಎ.ವಿ. ಕೃಷ್ಣಕುಮಾರ್‌ (ಕೆ.ಕೆ.) ಅವರ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT