ಶುಕ್ರವಾರ, ಮೇ 27, 2022
31 °C

ಓ ಮೈ ಲವ್ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಶಶಿಕುಮಾರ್‌ ಮತ್ತು ಕೀರ್ತಿ ಕಲ್ಕೆರೆ ನಟನೆಯ ಅದ್ಧೂರಿ ಚಿತ್ರ ‘ಓ ಮೈ ಲವ್‌’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.

‘ತೂಫಾನ್’, ‘ಬಳ್ಳಾರಿ ದರ್ಬಾರ್’, ‘18 ಟು 25’ ಚಿತ್ರಗಳನ್ನು ನಿರ್ದೇಶಿಸಿರುವ ಸ್ಮೈಲ್ ಶ್ರೀನು ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಬಿ. ರಾಮಾಂಜಿನಿ ಈ ಚಿತ್ರದ ಕಥೆ ಬರೆದು, ನಿರ್ಮಿಸುತ್ತಿದ್ದು, ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರವು ತೆರೆಗೆ ಬರುತ್ತಿದೆ. ಬೆಂಗಳೂರು ಸುತ್ತ ಮುತ್ತ ಮೊದಲ ಹಂತದ ಚಿತ್ರೀಕರಣ ನಡೆದಿದ್ದು, ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ನಡೆಯಲಿದೆ.

ಚಿತ್ರಕ್ಕೆ ಚರಣ್ ಅರ್ಜುನ್ ಸಂಗೀತ, ರಿಯಲ್ ಸತೀಶ್ ಸಾಹಸ, ಡಾ. ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ವಿ. ಮುರಳಿ ನೃತ್ಯ ನಿರ್ದೇಶನವಿದೆ. ದೀಪಿಕಾ ಆರಾಧ್ಯ, ಪೃಥ್ವಿರಾಜ್, ಎಸ್. ನಾರಾಯಣ್, ಸಾಧು ಕೋಕಿಲ, ಪವಿತ್ರಾ ಲೋಕೇಶ್, ಸಂಗೀತಾ, ಆನಂದ್, ಭಾಗ್ಯಶ್ರೀ , ಶಿಲ್ಪಾ, ರವಿ ರಾಮ್ ಕುಮಾರ್ ತಾರಾ ಬಳಗದಲ್ಲಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು