ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ‘ಓ ಮೈ ಲವ್’ ಗಾನ

Last Updated 27 ಆಗಸ್ಟ್ 2021, 8:12 IST
ಅಕ್ಷರ ಗಾತ್ರ

ಜಿಸಿಬಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ ಚಿತ್ರ ‘ಓ ಮೈ ಲವ್’ ಚಿತ್ರದ ಶೀರ್ಷಿಕೆ ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್ ತಿಂಗಳಲ್ಲಿ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲಾಗುವುದು ಎಂದು ನಿರ್ದೇಶಕ ‌ಸ್ಮೈಲ್ ಶ್ರೀನು ತಿಳಿಸಿದ್ದಾರೆ.

ಅಕ್ಷಿತ್ ಶಶಿಕುಮಾರ್, ಕೀರ್ತಿ ಕಲ್ಕೆರೆ ಚಿತ್ರದ ಪ್ರಧಾನ ಭೂಮಿಕೆಯಲ್ಲಿದ್ದಾರೆ.

ಆಗಸ್ಟ್‌ 30ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಎಚ್‌.ಎಂ.ಟಿ. ಗ್ರೌಂಡ್, ವಿಶ್ವವಿದ್ಯಾಲಯ ರಸ್ತೆಯಲ್ಲಿ ಚಿತ್ರೀಕರಣ ನಡೆಯಲಿದೆ.‌ ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಈ ಚಿತ್ರಕ್ಕೆ ಬಳ್ಳಾರಿ ದರ್ಬಾರ್ ಖ್ಯಾತಿಯ ಸ್ಮೈಲ್ ಶ್ರೀನು ಚಿತ್ರಕತೆ-ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಇದೊಂದು ಲವ್‌ಸ್ಟೋರಿ‌ ಆಗಿದ್ದರೂ ಕಾಮಿಡಿ, ಸೆಂಟಿಮೆಂಟ್ ಜೊತೆಗೆ ಭರ್ಜರಿ ಆಕ್ಷನ್‌ಗೂ ಅಷ್ಟೇ ಪ್ರಾಮುಖ್ಯತೆ ನೀಡಲಾಗಿದೆ ಎಂದರು ಅವರು.

‘ಚಿತ್ರದಲ್ಲಿ ಹಿರಿಯ ನಿರ್ದೇಶಕ ಎಸ್.ನಾರಾಯಣ್ ಹಾಗೂ ತೆಲುಗು ಖಳನಟ ದೇವ್‌ಗಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ’ ಎಂದರು ಶ್ರೀನು.

ಚಿತ್ರಕ್ಕೆ ಚರಣ್ ಅರ್ಜುನ್ ಅವರ ಸಂಗೀತ, ಹಾಲೇಶ್ ಎಸ್. ಅವರ ಛಾಯಾಗ್ರಹಣ, ರಿಯಲ್ ಸತೀಶ್ ಅವರ ಸಾಹಸ, ಡಾ.ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿ ಅವರ ಸಂಕಲನ, ಜನಾರ್ದನ್ ಅವರ ಕಲಾ ನಿರ್ದೇಶನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT