ಸೋಮವಾರ, ಆಗಸ್ಟ್ 8, 2022
23 °C

ಒಡಿಯಾ ಸಿನಿಮಾ ನಟ ರಾಯ್‌ಮೋಹನ್ ಪರಿದಾ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಒಡಿಶಾ: ಒಡಿಯಾ ಸಿನಿಮಾ ನಟ  ರಾಯ್‌ಮೋಹನ್ ಪರಿದಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

ರಾಯ್‌ಮೋಹನ್ ಅವರ ಈ ಸಾವು ಒಡಿಯಾ ಚಿತ್ರರಂಗ ಮತ್ತು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ ಎಂದು ಖ್ಯಾತ ನಟ ಹಾಗೂ ರಾಜಕಾರಣಿ ಸಿದ್ದಾಂತ ಮಹಾಪಾತ್ರ ಹೇಳಿದ್ದಾರೆ.

ಭುವನೇಶ್ವರದಲ್ಲಿರುವ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದಯ್‌ಪುರ ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿ ಕುಟುಂಬದೊಂದಿಗೆ ಅವರು ವಾಸಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. 

ಇದರ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೋಷಕ ಹಾಗೂ ಖಳನಾಯಕ ಪಾತ್ರಗಳಿಗೆ  ರಾಯ್‌ಮೋಹನ್ ಹೆಸರಾಗಿದ್ದರು. 1963ರಲ್ಲಿ ಜನಿಸಿದ ರೈಮೋಹನ್ ಅವರು 40ಕ್ಕೂ ಹೆಚ್ಚು ಒಡಿಯಾ, 15 ಬೆಂಗಾಲಿ ಚಿತ್ರಗಳಲ್ಲಿ ನಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು