ಒಂಬತ್ತನೇ ದಿಕ್ಕು: ದಯಾಳ್‌ರ 19ನೇ ಚಿತ್ರದಲ್ಲಿ ಲೂಸ್ ಮಾದ ಯೋಗಿ, ಅದಿತಿ ಪ್ರಭುದೇವ

ವಿಶಿಷ್ಟ ಚಿತ್ರಗಳ ನಿರ್ದೇಶನಕ್ಕೆ ಹೆಸರಾದ ದಯಾಳ್ ಪದ್ಮನಾಭನ್ ಈಗ ‘ಒಂಬತ್ತನೇ ದಿಕ್ಕು’ ಹುಡುಕಿದ್ದಾರೆ. ಲೂಸ್ ಮಾದ ಯೋಗಿ ಅವರು ನಾಯಕ, ಅದಿತಿ ಪ್ರಭುದೇವ ನಾಯಕಿ. ಇತ್ತೀಚೆಗೆ ಟ್ರೇಲರ್ ಬಿಡುಗಡೆ ನಡೆದಿದೆ. ದಯಾಳ್ ಅವರ 19ನೇ ಚಿತ್ರವಿದು.
‘ಈ ಚಿತ್ರದ ಕಥೆ ಎರಡು ಕಾಲಘಟ್ಟದಲ್ಲಿ ಸಾಗುತ್ತದೆ. ನಮಗೆ ಸಿಗುವುದಿಲ್ಲ ಎಂದು ಗೊತ್ತಿದ್ದರೂ ನಾವು ಮತ್ತೊಂದು ದಾರಿಯಲ್ಲಿ ಏನನ್ನೋ ಹುಡುಕುತ್ತಾ ಹೋಗುತ್ತೇವೆ. ಅದು ಮತ್ತೊಂದು ಕಡೆ ಸಿಗುತ್ತದೆ. ಅದಕ್ಕೆ ನಾನು ಈ ಶೀರ್ಷಿಕೆ ಆಯ್ಕೆ ಮಾಡಿಕೊಂಡೆ. ಮೂರು ಸಾಹಸ ಸನ್ನಿವೇಶಗಳಿವೆ. ಲೂಸ್ ಮಾದ ಯೋಗಿ ಅವರಂತಹ ಉತ್ತಮ ಕಲಾವಿದರೊಡನೆ ಕೆಲಸಮಾಡಿದ್ದು, ಖುಷಿ ತಂದಿದೆ’ ಎಂದರು.
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ತಾರಾಗಣದಲ್ಲಿದ್ದಾರೆ. ನ. 19ರಂದು ಚಿತ್ರ ಬಿಡುಗಡೆ ಆಗಲಿದೆ.
ಒಳ್ಳೆಯ ವಿಷಯಾಧರಿತ ಚಿತ್ರವಿದು. ಇತ್ತೀಚೆಗೆ ಸಿನಿಮಾ ನೋಡಿದೆ. ತುಂಬಾ ಚೆನ್ನಾಗಿದೆ. ಪ್ರೇಕ್ಷಕರು ನಮ್ಮ ಸಿನಿಮಾ ಇಷ್ಟಪಡುವುದರಲ್ಲಿ ಯಾವುದೇ ಸಂದೇಹವಿಲ್ಲ’ ಎಂದರು ನಾಯಕ ಲೂಸ್ ಮಾದ ಯೋಗಿ.
‘ನಾನು ದಯಾಳ್ ಅವರ ಜೊತೆ ಈ ಹಿಂದೆ ‘ರಂಗನಾಯಕಿ’ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಈ ಚಿತ್ರದಲ್ಲಿ ನನ್ನದು ವಿಭಿನ್ನ ಪಾತ್ರ. ದಯಾಳ್ ಅವರು ನಿಗದಿಯಂತೆ ಸಿನಿಮಾ ಮಾಡುತ್ತಾರೆ’ ಎಂದರು ನಾಯಕಿ ಅದಿತಿ. ಮಣಿಕಾಂತ್ ಕದ್ರಿ ಸಂಗೀತ ನೀಡಿರುವ ಈ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.