ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.8ಕ್ಕೆ ಸುನಿಯ ‘ಒಂದು ಸರಳ ಪ್ರೇಮಕಥೆ’

Published 8 ಜನವರಿ 2024, 18:46 IST
Last Updated 8 ಜನವರಿ 2024, 18:46 IST
ಅಕ್ಷರ ಗಾತ್ರ

‘ಅವತಾರ ಪುರುಷ’ ಸಿನಿಮಾ ಬಳಿಕ ‘ಗತವೈಭವ’ ಎಂಬ ಸಿನಿಮಾ ಕೈಗೆತ್ತಿಕೊಂಡಿದ್ದ ನಿರ್ದೇಶಕ ಸಿಂಪಲ್‌ ಸುನಿ, ಇವೆರಡನ್ನೂ ಬಿಟ್ಟು ಹೊಸ ಸಿನಿಮಾವೊಂದರ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುತ್ತಿದ್ದಾರೆ. 

ವಿನಯ್‌ ರಾಜ್‌ಕುಮಾರ್‌ ನಟನೆಯ ‘ಒಂದು ಸರಳ ಪ್ರೇಮಕಥೆ’ ಚಿತ್ರದ ಶೂಟಿಂಗ್‌ ಪೂರ್ಣಗೊಂಡಿದ್ದು, ಪ್ರೇಮಿಗಳ ದಿನದ ಸಮೀಪ ಎಂದರೆ ಫೆ.8ರಂದು ಚಿತ್ರ ಬಿಡುಗಡೆಗೆ ದಿನಾಂಕ ನಿಗದಿಪಡಿಸಿದ್ದಾರೆ. ಮ್ಯೂಸಿಕಲ್ ಲವ್‌ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮೂಲಕ ತಮಿಳಿನ ಹಿಟ್‌ ಸಿನಿಮಾ ‘ವಿಕ್ರಮ್’ನಲ್ಲಿ ನಟಿಸಿದ್ದ ಸ್ವತಿಷ್ಠ ಕೃಷ್ಣನ್ ಚಂದನವನ ಪ್ರವೇಶಿಸುತ್ತಿದ್ದಾರೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸುನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಮೊದಲ ಹಾಡು, ‘ನೀನ್ಯಾರೆಲೆ.. ನಿನಗಾಗಿಯೇ..ಈ ಜೀವ ಭಾವ ಸೋಜಿಗ..’ ಬಿಡುಗಡೆಯಾಗಿದ್ದು, ಸಿದ್ದು ಕೋಡಿಪುರ ಹಾಗೂ ಸುನಿ ಸಾಹಿತ್ಯ ಈ ಹಾಡಿಗಿದೆ. ಈ ಮಧುರ ಹಾಡಿಗೆ ಅರ್ಮಾನ್‌ ಮಲಿಕ್‌ ಧ್ವನಿಯಾಗಿದ್ದಾರೆ.

ವಿನಯ್ ರಾಜ್‌ಕುಮಾರ್‌ಗೆ ಸ್ವತಿಷ್ಠ ಕೃಷ್ಣನ್ ಹಾಗೂ ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಜೋಡಿಯಾಗಿದ್ದಾರೆ. ನಟ ರಾಘವೇಂದ್ರ ರಾಜ್‌ಕುಮಾರ್‌ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT