ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಸ್ಟರ್‌ನಲ್ಲಿ ಬರೆದ ‘ಒಂದು ಸರಳ ಪ್ರೇಮಕಥೆ’

Last Updated 9 ಮಾರ್ಚ್ 2023, 23:48 IST
ಅಕ್ಷರ ಗಾತ್ರ

ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’.

ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ. ಚಿತ್ರದ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ನಟ ವಿನಯ್ ರಾಜ್ ಕುಮಾರ್ ಮಾತನಾಡಿ, ‘ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ. ಜೊತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡುತ್ತಿದ್ದೇನೆ ಅನ್ನುವುದೇ ತುಂಬಾ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಅನ್ನೋದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತದೆ ಇದು ಸಿನಿಮಾದ ಒಂದು ಎಳೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಶೀರ್ಷಿಕೆ ನವೀಕರಣ ಮಾಡಿಕೊಂಡು ಬಂದಿದ್ದೆ. ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು. ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ’ ಎಂದರು.

ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ತಾರಾಗಣದಲ್ಲಿದ್ದಾರೆ. ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT