ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್‌ ರಾಜ್ಯದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಮುನ್ನಡೆ

Last Updated 3 ಮಾರ್ಚ್ 2018, 5:55 IST
ಅಕ್ಷರ ಗಾತ್ರ

ಕೊಹಿಮಾ: ಈಶಾನ್ಯ ಭಾಗದ ಪುಟ್ಟ ರಾಜ್ಯ ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ.

60 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ನಾಗಾಲ್ಯಾಂಡ್ ರಾಜ್ಯದಲ್ಲಿ 59 ವಿಧಾನಸಭಾ ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆದಿತ್ತು. ಆರಂಭಿಕ ಹಂತದಿಂದಲೂ ಬಿಜೆಪಿ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತರೂಢ ಎನ್‌ಪಿಎಫ್‌ ಪಕ್ಷ ಹಿನ್ನಡೆ ಅನುಭವಿಸಿದೆ.

ನ್ಯಾಷನಲ್‌ ಡೆಮಾಕ್ರಟಿಕ್‌ ಪ್ರೊಗ್ರೆಸ್‌ ಪಾರ್ಟಿ (ಎನ್‌ಡಿಪಿಪಿ) ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಕಾಂಗ್ರೆಸ್‌ ಮತ್ತು ಆಡಳಿತಾರೂಢ ಎನ್‌ಪಿಎಫ್‌ ಪಕ್ಷ ಏಕಾಂಗಿಯಾಗಿ ಸ್ಪರ್ಧೆ ಮಾಡಿವೆ.

11 ಗಂಟೆಯ ವೇಳೆಗೆ ಬಿಜೆಪಿ ಮೈತ್ರಿಕೂಟ 31 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎನ್‌ಪಿಎಫ್‌ 22 ಸ್ಥಾನ ಹಾಗೂ ಕಾಂಗ್ರೆಸ್‌ 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ ಮೈತ್ರಿಕೂಟದಲ್ಲಿ ಎನ್‌ಡಿಪಿಪಿ 20 ಸ್ಥಾನ ಹಾಗೂ ಬಿಜೆಪಿ 11 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಎನ್‌ಡಿಪಿಪಿ 40 ಸ್ಥಾನಗಳಲ್ಲಿ ಹಾಗೂ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿತ್ತು. ಎನ್‌ಪಿಎಫ್‌ 60 ಮತ್ತು ಕಾಂಗ್ರೆಸ್‌ 18 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ನಾಗಾಲ್ಯಾಂಡ್‌ ರಾಜ್ಯದಲ್ಲಿ ಬಿಜೆಪಿ ಮೈತ್ರಿ ಕೂಟ ಅಧಿಕಾರಕ್ಕೆ ಬಂದರೆ ಎನ್‌ಡಿಪಿಪಿ ಮುಖ್ಯಸ್ಥ ನೆಪ್ಯೂ ರಿಯೊ ಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿಯ ಯಥಂಗೂ ಪಟಾನ್‌ ಉಪ ಮುಖ್ಯಮಂತ್ರಿಯಾಗುವ ಸ್ಥಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT