ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಸಡಗರ ರಾಘವೇಂದ್ರ ನಿರ್ದೇಶನದ ಆಪರೇಷನ್ ‘ಲಂಡನ್ ಕೆಫೆ’ ಚಿತ್ರ ತಂಡ ಕೊನೆಯ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತಿದೆ.

‘ಅದಕ್ಕೂ ಮೊದಲು ಮರಾಠಿ ಮೂಲದ ಮತ್ತೊಬ್ಬ ಸ್ಟಾರ್ ಕಲಾವಿದ ವಿರಾಟ್ ಮಡಕೆ ಅವರು ಕಾಣಿಸಿಕೊಂಡಿರುವ ಈ ಚಿತ್ರದ ಮಾಸ್ ಲುಕ್ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆಗೊಂಡಿದೆ. ಈ ಚಿತ್ರ ಕನ್ನಡ ಮರಾಠಿ ಹಿಂದಿ ತಮಿಳು ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ತಯಾರಾಗುತ್ತಿದೆ. ಚಿತ್ರ ರಸಿಕರಿಗೆ ಇಷ್ಟವಾಗುವ ರೀತಿಯಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದೆ’ ಎನ್ನುವುದು ನಿರ್ದೇಶಕ ರಾಘವೇಂದ್ರ ಅವರ ಅನಿಸಿಕೆ.

ತನ್ನ ಮೊದಲ ಚಿತ್ರ ‘ಜಿಲ್ಕಾ’ ನಂತರ ಕವೀಶ್ ಶೆಟ್ಟಿ ಸಂಪೂರ್ಣ ಮಾಸ್ ಶೈಲಿಯಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಇನ್ನೊಂದು ಹೈಲೈಟ್ ಅಂದರೆ ನಾಯಕಿ ಮೇಘಾ ಶೆಟ್ಟಿ. ಈ ಚಿತ್ರದಲ್ಲಿ ಬಜಾರಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ತುಂಬಾ ಲವಲವಿಕೆಯಿಂದ ಕಾಣಿಸಿಕೊಂಡಿದ್ದಾರೆ. ಮರಾಠಿಯ ಶಿವಾನಿ ಸುರ್ವೆ, ವಿರಾಟ್ ಮಡಕೆ ಮುಂತಾದ ಹೆಸರಾಂತ ಕಲಾವಿದರು ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ.

ಈಗಾಗಲೇ ಉಡುಪಿ ಚಿಕ್ಕಮಗಳೂರು ಸುತ್ತಮುತ್ತ, ಭಟ್ಕಳ, ಕಳಸದ ಕಾಡು ಮತ್ತು ಬೆಂಗಳೂರು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಇನ್ನು ಕೆಲವೇ ದಿನಗಳ ಚಿತ್ರೀಕರಣಕ್ಕಾಗಿ ಚಿತ್ರ ತಂಡ ಸಜ್ಜಾಗುತ್ತಿದೆ. ವಿಜಯ್ ಕುಮಾರ್ ಶೆಟ್ಟಿ ಹವರಾಲ್ ದೀಪಕ್ ರಾಣೆ ರಮೇಶ್ ಕೊಠಾರಿ ಮತ್ತು ವಿಜಯ್ ಪ್ರಕಾಶ್ ಇಂಡಿಯನ್ ಫಿಲಂ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ ಲಾಂಛನದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.