ಲಾಸ್ ಏಂಜಲೀಸ್: 95 ನೇ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಇದು ಈ ಬಾರಿಯ ಆಸ್ಕರ್‌ನಲ್ಲಿ ಭಾರತಕ್ಕೆ ಲಭಿಸಿದ ಮೊದಲ ಪ್ರಶಸ್ತಿಯಾಗಿದೆ.
‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ.
ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.
'ಹೌಲೌಟ್', 'ಹೌ ಡು ಯು ಮೆಷರ್ ಎ ಇಯರ್?', 'ದಿ ಮಾರ್ಥಾ ಮಿಚೆಲ್ ಎಫೆಕ್ಟ್' ಮತ್ತು 'ಸ್ಟ್ರೇಂಜರ್ ಅಟ್ ದಿ ಗೇಟ್' ಕಿರು ಚಿತ್ರಗಳೊಡನೆ ಸ್ಪರ್ಧಿಸಿ, ‘ದಿ ಎಲಿಫೆಂಟ್ ವಿಸ್ಪರರ್ಸ್’ ಪ್ರಶಸ್ತಿ ಪಡೆದುಕೊಂಡಿದೆ.
ಈ ಹಿಂದೆ, ಭಾರತದಿಂದ "ಸ್ಮೈಲ್ ಪಿಂಕಿ" ಮತ್ತು "ಪಿರಿಯಡ್ ಎಂಡ್ ಆಫ್ ಸೆಂಟೆನ್ಸ್" ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತು. ಪಿರಿಯಡ್ ಎಂಡ್ ಆಫ್ ಸೆಂಟೆನ್ಸ್ ಕಿರುಚಿತ್ರವನ್ನು ಮೊಂಗಾ ನಿರ್ಮಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.