ಚಿತ್ರಗಳಲ್ಲಿ ನೋಡಿ: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಿಂಚಿದ ದೀಪಿಕಾ ಪಡುಕೋಣೆ
ಲಾಸ್ ಏಂಜಲೀಸ್: ಇಲ್ಲಿ ಸೋಮವಾರ ನಡೆದ 95 ನೇ ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ (ಆಸ್ಕರ್ ಪ್ರಶಸ್ತಿ) ನಟಿ ದೀಪಿಕಾ ಪಡುಕೋಣೆ ಮಿಂಚಿದರು.ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಆರ್‌ಆರ್‌ಆರ್ ಚಿತ್ರದ ನಾಟು ನಾಟು ಹಾಡಿನ ಪರಿಚಯ ಮಾಡುವ ಹೊಣೆಯನ್ನು ಅವರಿಗೆ ವಹಿಸಲಾಗಿತ್ತು.ಆಕರ್ಷಕ ಕಪ್ಪು ಬಣ್ಣದ ಉಡುಗೆಯಲ್ಲಿ ವೇದಿಕೆಗೆ ಬಂದ ದೀಪಿಕಾ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಬಗ್ಗೆ ಹೆಮ್ಮೆ ಮತ್ತು ಅಭಿಮಾನದಿಂದ ಪರಿಚಯ ಮಾಡಿಕೊಟ್ಟರು.ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಪಡೆಯುತ್ತಿರುವುದು ಭಾರತೀಯರ ಹೆಮ್ಮೆ ಎಂದು ಹೇಳಿದರು. ಬಳಿಕ ವೇದಿಕೆಯಲ್ಲಿಯೇ ಗಾಯಕರಾದ ಕಾಲಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಅವರು ಹಾಡು ಹೇಳಿದರು. ಕಲಾವಿದರು ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದರು.
Last Updated 13 ಮಾರ್ಚ್ 2023, 16:09 IST