ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಪಾರು ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಶ್ರೀಧರ್ ನಾಯಕ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ಅವರು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪಾರು, ಮಂಗಳ ಗೌರಿ ಮೊದಲಾದ ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು.

‘ನಮ್ಮ ನಡುವಿದ್ದ ಕಲಾವಿದ ಶ್ರೀಧರ್ ನಾಯಕ್ ಬಹಳ ದಿನಗಳ ಅನಾರೋಗ್ಯದಿಂದ ಮುಕ್ತರಾಗಿ ರಾತ್ರಿ 10 ಗಂಟೆಗೆ ದೇವಸನ್ನಿಧಿ ಸೇರಿದ್ದಾರೆ‘ ಎಂದು ನಟ ನಾಗೇಂದ್ರ ಶಾನ್ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ಸುದೀಪ್ ನಟನೆಯ ಮ್ಯಾಕ್ಸ್ ಚಿತ್ರದಲ್ಲೂ ಶ್ರೀಧರ್ ನಾಯಕ್ ನಟಿಸಿದ್ದರು. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದೇನೆ. ಆರ್ಥಿಕ ಸಹಾಯ ಮಾಡಿ ಎಂದು ಶ್ರೀಧರ್ ಧಾರಾವಾಹಿ, ಸಿನಿಮಾ ಮಂದಿಗೆ ಮನವಿ ಮಾಡಿಕೊಂಡಿದ್ದ ವಿಡಿಯೊ ಸ್ವಲ್ಪ ದಿನಗಳ ಹಿಂದೆ ಗಮನ ಸೆಳೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.