ಭಾನುವಾರ, ಆಗಸ್ಟ್ 25, 2019
20 °C

‘ಪೈಲ್ವಾನ್‌’ ಆಡಿಯೊ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿಗೆ ಶಿಫ್ಟ್‌

Published:
Updated:
Prajavani

ಚಂದನವನದ ಬಹುನಿರೀಕ್ಷಿತ ‘ಪೈಲ್ವಾನ್‌’ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭ ಬೆಂಗಳೂರಿಗೆ ಶಿಫ್ಟ್‌ ಆಗಿದೆ. ಚಿತ್ರದುರ್ಗದಲ್ಲಿ ಇದೇ 9ರಂದು ಅದ್ದೂರಿಯಾಗಿ ಆಡಿಯೊ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿತ್ತು. ಆದರೆ, ಉತ್ತರ ಕರ್ನಾಟಕ ಸೇರಿದಂತೆ ನಾಡಿನ ಹಲವೆಡೆ ಪ್ರವಾಹ ತಲೆದೋರಿದ್ದು ಜನ– ಜಾನುವಾರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ, ಕಾರ್ಯಕ್ರಮವನ್ನು ಮುಂದೂಡಿತ್ತು. ಈಗ ಬೆಂಗಳೂರಿನಲ್ಲಿ ಆಗಸ್ಟ್‌ 18ರಂದು ಆಡಿಯೊ ಬಿಡುಗಡೆ ಮಾಡಲು ಮುಂದಾಗಿದೆ. 

‘ಹೆಬ್ಬುಲಿ’ ಖ್ಯಾತಿಯ ಎಸ್. ಕೃಷ್ಣ ನಿರ್ದೇಶನದ ನಟ ಸುದೀಪ್‌ ನಾಯಕ ನಟನಾಗಿರುವ ಈ ಚಿತ್ರ ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ತೆರೆ ಕಾಣಲಿದೆ. 3 ಸಾವಿರಕ್ಕೂ ಹೆಚ್ಚು ಥಿಯೇಟರ್‌ನಲ್ಲಿ ಸೆಪ್ಟೆಂಬರ್‌ 12ರಂದು ಸಿನಿಮಾ ಬಿಡುಗಡೆಗೆ ಚಿತ್ರತಂಡ ತೀರ್ಮಾನಿಸಿದೆ.

ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ, ಆಕಾಂಕ್ಷಾ ಸಿಂಗ್, ಕಬೀರ್‌ ದುಹಾನ್‌ ಸಿಂಗ್‌ ಮುಖ್ಯಭೂಮಿಕೆಯಲ್ಲಿದ್ದಾರೆ. ಆಡಿಯೊ ಬಿಡುಗಡೆಯ ಬಳಿಕ ಚಿತ್ರದ ಟ್ರೇಲರ್‌ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.

Post Comments (+)