ಸೋಮವಾರ, ಸೆಪ್ಟೆಂಬರ್ 21, 2020
27 °C

ಇಂದು ‘ಪೈಲ್ವಾನ್‌’ ಹೊಸ ಬಾಕ್ಸಿಂಗ್‌ ಪೋಸ್ಟರ್‌ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೃಷ್ಣ ನಿರ್ದೇಶನದ ನಟ ಸುದೀಪ್‌ ನಟನೆಯ ‘ಪೈಲ್ವಾನ್‌’ ಚಂದನವನದಲ್ಲಿ ಭಾರೀ ಕುತೂಹಲ ಮೂಡಿಸಿರುವ ಚಿತ್ರ. ಆಗಸ್ಟ್‌ 8ರಂದು ಈ ಚಿತ್ರದ ಬಿಡುಗಡೆಗೆ ದಿನಾಂಕವೂ ನಿಗದಿಯಾಗಿದೆ. ಎಂಟು ಭಾಷೆಗಳಲ್ಲಿ ತೆರೆ ಕಾಣುತ್ತಿದ್ದು, ಕಿಚ್ಚನ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಅಂದಹಾಗೆ ‘ಪೈಲ್ವಾನ್‌’ ಚಿತ್ರದ ಮೊಟ್ಟಮೊದಲ ‘ಬಾಕ್ಸಿಂಗ್ ಪೋಸ್ಟರ್‌’ ಜೂನ್ 4ರಂದು ಸಂಜೆ 4ಗಂಟೆಗೆ ಎಂಟು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಕೃಷ್ಣ ಟ್ವಿಟರ್‌ ಮೂಲಕ ಬಹಿರಂಗಪಡಿಸಿದ್ದಾರೆ.

ಪ್ರಸ್ತುತ ಕನ್ನಡದ ಸಿನಿಮಾಗಳಿಗೆ ಹೊರರಾಜ್ಯಗಳಲ್ಲೂ ಮಾರುಕಟ್ಟೆ ವಿಸ್ತರಣೆಗೊಂಡಿದೆ. ‘ಕೆ.ಜಿ.ಎಫ್‌’ ಚಿತ್ರ ಐದು ಭಾಷೆಗಳಲ್ಲಿ ತೆರೆಕಂಡಿತ್ತು. ‘ಪೈಲ್ವಾನ್‌’ ಎಂಟು ಭಾಷೆಗಳಲ್ಲಿ ತೆರೆಕಾಣುತ್ತಿರುವುದ ಕನ್ನಡ ಚಿತ್ರರಂಗದಮಟ್ಟಿಗೆ ಹೊಸ ದಾಖಲೆ. 

ನಟರಾದ ಚಿರಂಜೀವಿ, ಮೋಹನ್‌ ಲಾಲ್‌, ಸುನೀಲ್‌ ಶೆಟ್ಟಿ, ಕಿಚ್ಚ ಸುದೀಪ್‌ ಸಮ್ಮುಖದಲ್ಲಿ ಮಂಗಳವಾರ ಸಂಜೆ 4 ಗಂಟೆಗೆ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಲಾಗುತ್ತದೆ ಎಂದು ನಿರ್ದೇಶಕ ಕೃಷ್ಣ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು