ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2,500 ಥಿಯೇಟರ್‌ನಲ್ಲಿ ‘ಪೈಲ್ವಾನ್‌’ ಕುಸ್ತಿ?

Last Updated 1 ಜುಲೈ 2019, 10:12 IST
ಅಕ್ಷರ ಗಾತ್ರ

‘ಹೆಬ್ಬುಲಿ’ ಚಿತ್ರದ ಖ್ಯಾತಿಯ ನಿರ್ದೇಶಕ ಕೃಷ್ಣ ಮತ್ತು ನಟ ಸುದೀಪ್‌ ಕಾಂಬಿನೇಷನ್‌ನಡಿ ಮೂಡಿಬರುತ್ತಿರುವ ಚಿತ್ರ ‘ಪೈಲ್ವಾನ್’ ಚಂದನವನದಲ್ಲಿ ಭಾರೀ ಕುತೂಹಲ ಹೆಚ್ಚಿಸಿದೆ. ಕನ್ನಡ ಸೇರಿದಂತೆ ಎಂಟು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಆಗಸ್ಟ್‌ 8ರಂದು ಚಿತ್ರ ಬಿಡುಗಡೆಯ ದಿನಾಂಕವೂ ನಿಗದಿಯಾಗಿದೆ.

ಅಂದಹಾಗೆ ಎಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದೆ ಎಂಬ ಪ್ರಶ್ನೆ ಕಿಚ್ಚನ ಅಭಿಮಾನಿಗಳಿಗೆ ಕಾಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು, 2,500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ ಎಂಬ ಸುದ್ದಿ ಹೊರಬಿದ್ದಿದೆ.

ಈಗಾಗಲೇ ಸಿನಿಮಾದ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿವೆ. ಚಿತ್ರದ ಹಿಂದಿ, ತೆಲುಗು ಮತ್ತು ತಮಿಳು ವಿತರಣೆಯ ಹಕ್ಕುಗಳ ಮಾತುಕತೆ ಅಂತಿಮ ಹಂತದಲ್ಲಿ ಇದೆಯಂತೆ.

ನಟ ಯಶ್‌ ನಟನೆಯ ‘ಕೆಜಿಎಫ್‌– ಚಾಪ್ಟರ್‌ 1’ ಚಿತ್ರ ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ 2,000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಂಡು ಭರ್ಜರಿ ಯಶಸ್ಸುಗಳಿಸಿತ್ತು. ಈಗ ‘ಪೈಲ್ವಾನ್’ ಕೂಡ ಅದೇ ಹಾದಿಗೆ ಹೊರಳಿರುವುದು ಕುತೂಹಲ ಮೂಡಿಸಿದೆ.

‘ಪೈಲ್ವಾನ್’ ಏಕಕಾಲಕ್ಕೆ ಎಂಟು ಭಾಷೆಗಳಲ್ಲಿ ತೆರೆ ಕಾಣುತ್ತಿರುವುದರಿಂದ ಸುದೀಪ್‌ ಅವರ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ. ಇದು ಕುಸ್ತಿ ಆಧಾರಿತ ಸಿನಿಮಾ. ಹಾಲಿವುಡ್‌ನ ಸಾಹಸ ನಿರ್ದೇಶಕ ಲಾರ್ನೆಲ್‌ ಸ್ಟೋವಲ್‌ ಸಾಹಸ ನಿರ್ದೇಶಿಸಿದ್ದಾರೆ.

ಹಿಂದಿ ಭಾಷೆಯ ಕಿರುತೆರೆ ನಟಿ ಆಕಾಂಕ್ಷಾ ಸಿಂಗ್ ಇದರ ನಾಯಕಿ. ಬಾಲಿವುಡ್‌ ನಟ ಸುನೀಲ್ ಶೆಟ್ಟಿ ಕೂಡ ನಟಿಸಿದ್ದಾರೆ. ಕಬೀರ್‌ ದುಹಾನ್‌ ಸಿಂಗ್, ಸುಶಾಂತ್‌ ಸಿಂಗ್, ಅವಿನಾಶ್‌, ಶರತ್‌ ಲೋಹಿತಾಶ್ವ ತಾರಾಗಣದಲ್ಲಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಕರುಣಾಕರ್‌ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT