ಭಾನುವಾರ, ಆಗಸ್ಟ್ 25, 2019
26 °C

ವರಮಹಾಲಕ್ಷ್ಮಿ ಹಬ್ಬಕ್ಕೆ ‘ಪೈಲ್ವಾನ್‌’ ಆಡಿಯೊ ಬಿಡುಗಡೆ

Published:
Updated:

ಚಂದನವನದ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರದ ಆಡಿಯೊ ಬಿಡುಗಡೆ ಸಮಾರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಆಗಸ್ಟ್ 9ರಂದು ನಿಗದಿತ ಸ್ಥಳವಾದ ಚಿತ್ರದುರ್ಗದಲ್ಲೇ ನಡೆಯಲಿದೆ. ಸೆಪ್ಟೆಂಬರ್‌ 12ರಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದೆ.

‘ಆಡಿಯೊ ಬಿಡುಗಡೆಯ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚಿತ್ರದ ನಾಯಕ ಸುದೀಪ್‌ ಟ್ವೀಟ್‌ ಮಾಡಿದ್ದಾರೆ.

ಜುಲೈ 27ರಂದು ಆಡಿಯೊ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಆದರೆ, ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಚಿತ್ರತಂಡ ಸಮಾರಂಭವನ್ನು ಮುಂದೂಡಿತ್ತು. 

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಆಗಸ್ಟ್‌ ಮೊದಲ ವಾರದಲ್ಲಿಯೇ ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ, ಸಿಜಿ ಕೆಲಸ ಇನ್ನೂ ಪೂರ್ಣಗೊಂಡಿಲ್ಲ. ಸಿನಿಮಾದಲ್ಲಿ 1 ಗಂಟೆ 40 ನಿಮಿಷದಷ್ಟು ಗ್ರಾಫಿಕ್ಸ್‌ ಇದೆಯಂತೆ. ಈ ಕೆಲಸದ ಜವಾಬ್ದಾರಿ ಹೊತ್ತಿರುವುದು ರೆಡ್‌ ಚಿಲ್ಲೀಸ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ. ಇದರಿಂದ ಬಿಡುಗಡೆಗೆ ವಿಳಂಬವಾಗುತ್ತಿದೆ ಎನ್ನುತ್ತದೆ ಚಿತ್ರತಂಡ.

ಚಿತ್ರದಲ್ಲಿ ಆರು ಹಾಡುಗಳು ಮತ್ತು ಎರಡು ಥೀಮ್‌ ಸಾಂಗ್‌ಗಳಿದ್ದು, ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಕೃಷ್ಣ ನಿರ್ದೇಶನದ ಈ ಚಿತ್ರದಲ್ಲಿ ಆಕಾಂಕ್ಷಾ ಸಿಂಗ್‌ ನಾಯಕಿ. ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ, ಕಬೀರ್ ದುಹಾನ್ ಸಿಂಗ್‌, ಶರತ್‌ ಲೋಹಿತಾಶ್ವ ತಾರಾಗಣದಲ್ಲಿದ್ದಾರೆ. ಸ್ವಪ್ನ ಕೃಷ್ಣ ಬಂಡವಾಳ ಹೂಡಿದ್ದಾರೆ. 

Post Comments (+)