ನಟ ಸುದೀಪ್ ನಾಯಕ ನಟನಾಗಿರುವ ‘ಪೈಲ್ವಾನ್’ ಸಿನಿಮಾ ಸೆಪ್ಟೆಂಬರ್ 12ರಂದು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳ ಭಾಷೆಯಲ್ಲಿ ತೆರೆ ಕಾಣಲಿದೆ.
‘ಹೆಬ್ಬುಲಿ’ ಖ್ಯಾತಿಯ ಕೃಷ್ಣ ನಿರ್ದೇಶನದ ಈ ಚಿತ್ರಕ್ಕೆ ಬಂಡವಾಳ ಹೂಡಿರುವುದು ಅವರ ಪತ್ನಿ ಸ್ವಪ್ನಾ ಕೃಷ್ಣ. 2,500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೆ ಚಿತ್ರತಂಡ ಯೋಚಿಸಿದೆ.
ಅಂದಹಾಗೆ ‘ಪೈಲ್ವಾನ್’ನ ಕನ್ನಡ ಅವತರಣಿಕೆಗೆ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಯು/ಎ ಪ್ರಮಾಣ ಪತ್ರ ನೀಡಿದೆ. ಇದನ್ನು ನಿರ್ದೇಶಕ ಕೃಷ್ಣ ಅವರು ಟ್ವಿಟ್ ಮೂಲಕ ಖಚಿತಪಡಿಸಿದ್ದಾರೆ.