ಶುಕ್ರವಾರ, ಏಪ್ರಿಲ್ 23, 2021
24 °C

‘ಪೈಲ್ವಾನ್‌’ಗೆ ಶುಭ ಕೋರಿದ ಪಿ.ವಿ.ಸಿಂಧು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣ ನಿರ್ದೇಶನದ ಸುದೀಪ್‌ ನಟನೆಯ ‘ಪೈಲ್ವಾನ್’ ಚಿತ್ರ ಸೆ.12ರಂದು ತೆರೆಗೆ ಅಪ್ಪಳಿಸಲಿದೆ. ಏಕಕಾಲಕ್ಕೆ ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮಲಯಾಳ ಭಾಷೆಯಲ್ಲಿ ತೆರೆಕಾಣಲಿದೆ. ವಿದೇಶಗಳಲ್ಲೂ ಬಿಡುಗಡೆ ಕಾಣುತ್ತಿರುವ ಪೈಲ್ವಾನ್‌ನ ಕುಸ್ತಿಯ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಿಚ್ಚನ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಈ ಚಿತ್ರದ ಪ್ರೀ ರಿಲೀಸ್‌ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ವಿ.ಪಿ.ಸಿಂಧು ಆಗಮಿಸಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಿತು.

ಈ ಕುರಿತು ಸುದೀಪ್‌, ‘ಪೈಲ್ವಾನ್‌ನ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ನನಗಿಂತ ಅತ್ಯಂತ ಎತ್ತರ ಸ್ಥಾನದಲ್ಲಿ ಇರುವ ವ್ಯಕ್ತಿಯ(ಪಿ.ವಿ. ಸಿಂಧು) ಪಕ್ಕದಲ್ಲಿ ನಾನು ನಿಂತುಕೊಳ್ಳುತ್ತೇನೆ ಎಂದು ನಾನು ಅಂದುಕೊಂಡಿರಲಿಲ್ಲ. ನಿಮ್ಮ ಭೇಟಿಯಿಂದ ನನಗೆ ಖುಷಿಯಾಗಿದೆ’ ಎಂದು ಸಿಂಧು ಅವರ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಸಿಂಧು ಕೂಡ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, ‘ಸುದೀಪ್‌ ಸರ್‌ ನಿಮ್ಮನ್ನು ಭೇಟಿ ಮಾಡಿದ್ದು ನನಗೆ ಖುಷಿಯಾಗಿದೆ. ಪೈಲ್ವಾನ್‌ ಚಿತ್ರದ ನಿರ್ಮಾಣದ ಹಿಂದೆ ದೊಡ್ಡ ಶ್ರಮವಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಕೋರಿದ್ದಾರೆ.

ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಈ ಚಿತ್ರದ ಕುಸ್ತಿಯ ದೃಶ್ಯಗಳನ್ನು ಚಿತ್ರೀಕರಿಸಿರುವುದು ವಿಶೇಷ. ಇನ್ನು ಚಿತ್ರದ ಆರಂಭದಲ್ಲಿ ಕುಸ್ತಿ ಬಗ್ಗೆ ನಟ ರಮೇಶ್ ಅರವಿಂದ್ ಅವರ ಹಿನ್ನೆಲೆ ಧ್ವನಿಯಲ್ಲಿ ವಿವರಣೆ ಮೂಡಿಬರಲಿದೆ.

ಈ ಚಿತ್ರಕ್ಕೆ ಬಂಡವಾಳ ಹೂಡಿರುವುದು ಸ್ವಪ್ನಾ ಕೃಷ್ಣ. ಹಿಂದಿ ಕಿರುತೆರೆಯ ನಟಿ ಆಕಾಂಕ್ಷಾ ಸಿಂಗ್‌ ಇದರ ನಾಯಕಿ. ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ, ಕಬೀರ್‌ ದುಹಾನ್‌ ಸಿಂಗ್ ತಾರಾಗಣದಲ್ಲಿದ್ದಾರೆ. ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್‌ ಆಚಾರ್ಯ ಈ ಸಿನಿಮಾಕ್ಕೂ ನೃತ್ಯ ನಿರ್ದೇಶಿಸಿದ್ದಾರೆ. ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಕರುಣಾಕರ ಎ. ಅವರದ್ದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು