ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಜಪೇಯಿ ಬಯೋಪಿಕ್‌: ‘ಮೈ ಅಟಲ್​ ಹು' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ

ರವಿ ಜಾದವ್​ ನಿರ್ದೇಶನದ ಮೈ ಅಟಲ್​ ಹು ಚಿತ್ರ
Published 17 ಡಿಸೆಂಬರ್ 2023, 11:09 IST
Last Updated 17 ಡಿಸೆಂಬರ್ 2023, 11:09 IST
ಅಕ್ಷರ ಗಾತ್ರ

ಮುಂಬೈ (ಮಹಾರಾಷ್ಟ್ರ): ಭಾರತ ಕಂಡ ಮಹಾನ್‌ ರಾಜಕಾರಣಿ, ವಾಗ್ಮಿ, ಮಾಜಿ ಪ್ರಧಾನಿ ದಿ. ಅಟಲ್‌ ಬಿಹಾರಿ ವಾಜಪೇಯಿ ಅವರ ಬಯೋಪಿಕ್‌ ‘ಮೈ ಅಟಲ್‌ ಹು’ ಚಿತ್ರದ ಟ್ರೇಲರ್‌ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

ಈ ಬಗ್ಗೆ ನಟ ಪಂಕಜ್ ತ್ರಿಪಾಠಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. 'ಅಟಲ್ ಬಿಹಾರಿ ವಾಜಪೇಯಿ ಜಿ ಅವರನ್ನು ಸ್ವಾಗತಿಸಲು ಎಲ್ಲರೂ ಒಟ್ಟಾಗಿ ಬನ್ನಿ. ಡಿಸೆಂಬರ್ 20ರಂದು ‘ಮೈ ಅಟಲ್‌ ಹು’ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. 2024ರ ಜನವರಿ 19ರಂದು ಚಿತ್ರ ತೆರೆಕಾಣಲಿದೆ' ಎಂದು ಅವರು ಬರೆದುಕೊಂಡಿದ್ದಾರೆ.

ಅಟಲ್​ ಬಿಹಾರಿ ವಾಜಪೇಯಿ ಪಾತ್ರದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ನಟ ಪಂಕಜ್​​ ತ್ರಿಪಾಠಿ ನಟಿಸಿದ್ದಾರೆ. ಇದೇ ಡಿಸೆಂಬರ್ 20ರಂದು ನಿರ್ಮಾಪಕರು ಚಿತ್ರದ ಅಧಿಕೃತ ಟ್ರೇಲರ್ ಅನ್ನು ಅನಾವರಣಗೊಳಿಸಲಿದ್ದಾರೆ.

ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ರವಿ ಜಾದವ್​ ಆ್ಯಕ್ಷನ್ ಕಟ್​ ಹೇಳಿದ್ದಾರೆ. ಸಲೀಮ್ ಸುಲೈಮಾನ್​ ಸಂಗೀತ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT