ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡ ದಂಪತಿ, ‘ನಮ್ಮ ಪುಟ್ಟ ಜಗತ್ತು ಬರುವ ಹಾದಿಯಲ್ಲಿದೆ’ ಎಂದು ಬರೆದುಕೊಂಡಿದ್ದಾರೆ.

ಪರಿಣಿತಿ ಮತ್ತು ರಾಘವ್ 2023ರ ಸೆ.24ರಂದು ವಿವಾಹವಾಗಿದ್ದರು. ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್ನಲ್ಲಿ ಈ ಜೋಡಿ ಅದ್ಧೂರಿಯಾಗಿ ಹಸೆಮಣೆ ಏರಿತ್ತು.

ಇತ್ತೀಚೆಗೆ ಈ ದಂಪತಿ ಬಾಲಿವುಡ್ನ ಹಾಸ್ಯ ಕಾರ್ಯಕ್ರಮ ‘ಗ್ರೇಟ್ ಇಂಡಿಯನ್ ಕಪಿಲ್ ಶೋ’ದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕಪಿಲ್ ಅವರು ಸಿಹಿಸುದ್ದಿ ಬರಲಿದೆಯೇ ಎಂದು ಕೇಳಿದ್ದ ಪ್ರಶ್ನೆಗೆ ‘ಶೀಘ್ರ ಉತ್ತರಿಸಲಿದ್ದೇವೆ’ ಎಂದು ದಂಪತಿ ಹೇಳಿದ್ದರು.

ಪರಿಣಿತಿ ತಾಯಿಯಾಗುತ್ತಿರುವ ಕುರಿತು ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದಂತೆ ಸೋನಮ್ ಕಪೂರ್, ಭೂಮಿ ಪಡ್ನೇಕರ್ ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.