ಬುಧವಾರ, ನವೆಂಬರ್ 25, 2020
22 °C

ಲಕ್ಕಿಗೆ ‘ಪಾರೂ’ ಪೈ ನಾಯಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರದಲ್ಲಿ ಕಿರುತೆರೆಯ ಮೋಕ್ಷಿತಾ ಪೈ ನಾಯಕಿಯಾಗಿ ನಟಿಸಲಿದ್ದಾರೆ.

‘ಸಲಗ’ ಚಿತ್ರ ನಿರ್ದೇಶಿಸಿ, ನಾಯಕನಾಗಿ ದುನಿಯಾ ವಿಜಯ್ ನಟಿಸಿದ್ದಾರೆ. ಕೆ.ಪಿ. ಶ್ರೀಕಾಂತ್‌ ನಿರ್ಮಾಣದ ಈ ಚಿತ್ರ ಸದ್ಯದಲ್ಲೆ ತೆರೆಕಾಣುವ ನಿರೀಕ್ಷೆಯೂ ಇದೆ.

ವಿಜಯ್‌ ಹೊಸ ಸಿನಿಮಾ ನಿರ್ದೇಶನ ಮಾಡುವ ಸಂಗತಿಯನ್ನು ಇತ್ತೀಚೆಗಷ್ಟೇ ಹೇಳಿಕೊಂಡಿದ್ದರು. ರಾಜ್ ಕುಟುಂಬದ ಲಕ್ಕಿ ಗೋಪಾಲ್ ಅವರನ್ನು ತಮ್ಮ ಮುಂದಿನ ಚಿತ್ರದಲ್ಲಿ ನಾಯಕನಾಗಿ ಪರಿಚಯಿಸುತ್ತಿರುವುದಾಗಿ ಹೇಳಿದ್ದರು. ಇದೀಗ ಆ ಚಿತ್ರಕ್ಕೆ ನಾಯಕಿಯಾಗಿ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ಕರಾವಳಿ ಬೆಡಗಿ ಮೋಕ್ಷಿತಾ ಪೈ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ದುನಿಯಾ ವಿಜಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಲಿರುವ ಈ ಚಿತ್ರದಲ್ಲಿ ಬಹುತೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆಯಂತೆ. ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದ ಲಕ್ಕಿ ಗೋಪಾಲ್ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಗ್ರಾಂಡ್‌ ಎಂಟ್ರಿಕೊಡುವ ಕಾತರದಲ್ಲಿದ್ದಾರೆ. ‘ಪಾರು’ ಧಾರಾವಾಹಿ ಮೂಲಕ ಹೆಂಗಳೆಯರ ಗಮನ ಸೆಳೆದಿರುವ ಮೋಕ್ಷಿತಾ ಪೈ ಅವರಿಗೂ ಬೆಳ್ಳಿತೆರೆಯಲ್ಲಿ ಚೊಚ್ಚಲ ಸಿನಿಮಾ.

ಇನ್ನು ಶೀರ್ಷಿಕೆ ಅಂತಿಮವಾಗದ ಈ ಸಿನಿಮಾಕ್ಕೆ ಇನ್ನೂ ಹಲವು ಹೊಸಬರನ್ನು ಪರಿಚಯಿಸುವ ಉಸ್ತುವಾರಿಯನ್ನು ನಿರ್ದೇಶಕರು ಹೊತ್ತಿದ್ದು, ಶೀಘ್ರದಲ್ಲಿ ಶೀರ್ಷಿಕೆ ಅಂತಿಮಗೊಳಿಸಿ, ಚಿತ್ರೀಕರಣ ಆರಂಭಿಸುವ ಯೋಜನೆಯಲ್ಲಿ ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು