ಬುಧವಾರ, ಫೆಬ್ರವರಿ 26, 2020
19 °C

ಪಾರ್ವತಮ್ಮ ರಾಜ್‌ಕುಮಾರ್ ಜನ್ಮದಿನ: miss you ಅಮ್ಮ ಎಂದು ಶಿವಣ್ಣ ಟ್ವೀಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ಮಾಪಕಿ, ಹೆಮ್ಮೆಯ ಕನ್ನಡತಿ ದಿವಂಗತ ಪಾರ್ವತಮ್ಮ ರಾಜ್ ಕುಮಾರ್ ಅವರ 80ನೇ ವರ್ಷದ ಹುಟ್ಟುಹಬ್ಬ(ಡಿ.6).

ಜನ್ಮ ಕೊಟ್ಟ ಅಮ್ಮನ ಜನುಮದಿನ. ಈ ಜನ್ಮದಲ್ಲಿ ಈ ಪಾರ್ವತಿ ಪುತ್ರನಾಗಲು ಪುಣ್ಯ ಮಾಡಿದ್ದೆ ... miss you ಅಮ್ಮ ಎಂದು ನಟ ಶಿವರಾಜ್‌ ಕುಮಾರ್‌ ಟ್ವೀಟ್‌  ಶುಕ್ರವಾರ ಟ್ವೀಟ್‌ ಮಾಡಿದ್ದಾರೆ.

ಅಮ್ಮಾ ಎಂದಿಂಗೂ ನೀನು ನನ್ನ ಶಕ್ತಿ ಎಂದು ಪುನೀತ್‌ ರಾಜ್‌ಕುಮಾರ್‌ ಟ್ವೀಟ್ ಮಾಡಿದ್ದಾರೆ. 

ವಜ್ರೇಶ್ವರಿ ಚಿತ್ರ ನಿರ್ಮಾಣ ಸಂಸ್ಥೆಯ ಮೂಲಕ ಪಾರ್ವತಮ್ಮ ರಾಜ್‌ಕುಮಾರ್‌ ಹಲವು ಚಿತ್ರಗಳನ್ನು ನಿರ್ಮಿಸಿದ್ದರು. ಅವರು ನಿರ್ಮಿಸಿದ ಮೊದಲ ಚಿತ್ರ ‘ತ್ರಿಮೂರ್ತಿ’. ‘ಹಾಲು ಜೇನು’, ‘ಕವಿರತ್ನ ಕಾಳಿದಾಸ’, ‘ಜೀವನ ಚೈತ್ರ’ ಸೇರಿದಂತೆ ಸುಮಾರು 80 ಚಿತ್ರಗಳನ್ನು ಅವರು ನಿರ್ಮಿಸಿದ್ದಾರೆ.

ಮೈಸೂರಿನಲ್ಲಿ ಶಕ್ತಿಧಾಮ ಅಬಲಾಶ್ರಮವನ್ನು ಸ್ಥಾಪನೆ ಮಾಡಿದ್ದು ಅಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಮತ್ತು ಮಹಿಳೆಯರಿಗೆ ವಸತಿ ಸೌಕರ್ಯವನ್ನು ಕಲ್ಪಿಸಿದ್ದಾರೆ. 

ಪಾರ್ವತಮ್ಮ ಅವರು1939ರಲ್ಲಿ ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಜನಿಸಿದ್ದರು. 1953ರಲ್ಲಿ ರಾಜ್‌ಕುಮಾರ್‌ ಅವರೊಂದಿಗೆ ಪಾರ್ವತಮ್ಮ ಅವರ ವಿವಾಹವಾಗಿತ್ತು. 2017ರ ಮೇ 31ರಂದು ಪಾರ್ವತಮ್ಮ ರಾಜ್‌ಕುಮಾರ್ ಬಹುಅಂಗಾಂಗ ವೈಫಲ್ಯದಿಂದ ನಿಧನರಾದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು