ಮೈಸೂರು: ‘ನನ್ನ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದಿರುವ ವ್ಯಕ್ತಿಯೊಬ್ಬರು ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ’ ಎಂದು ಆರೋಪಿಸಿ ನಟಿ ಪವಿತ್ರಾ ಲೋಕೇಶ್, ನಜರಾಬಾದ್‌ನ ಸೈಬರ್ ಮತ್ತು ಆರ್ಥಿಕ ಅಪರಾಧ ಠಾಣೆಗೆ ದೂರು ನೀಡಿದ್ದಾರೆ.
‘ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದಲ್ಲದೇ, ಘನತೆಗೆ ಧಕ್ಕೆ ತರುವ ಸಂದೇಶಕಳುಹಿಸುವ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಕೋರಿದ್ದಾರೆ. ಸೈಬರ್ ಅಪರಾಧ ಪೊಲೀಸರು ತನಿಖೆ ನಡೆಸಿದ್ದಾರೆ.