ಪ್ರಜ್ವಲ್ ದೇವರಾಜ್ ಅಭಿನಯದ ಪಿಡಿ–35 ಚಿತ್ರದ ಫಸ್ಟ್‌ಲುಕ್ ಹಾಗೂ ಶೀರ್ಷಿಕೆ ಬಿಡುಗಡೆ ಜುಲೈ 4ರಂದು ನಡೆಯಲಿದೆ. ಅಂದಹಾಗೆ ಅಂದು ಪ್ರಜ್ವಲ್ ಅವರ ಹುಟ್ಟುಹಬ್ಬವೂ ಹೌದು.
ಪಿ.ಡಿ. –35 ಅಂದರೆ ಪ್ರಜ್ವಲ್ ದೇವರಾಜ್–35 ಎಂದು ಅರ್ಥ. ಇದು ಅವರ ಅಭಿನಯದ 35ನೇ ಚಿತ್ರವೂ ಹೌದು. ಈ ಚಿತ್ರ ಅವರ ಹುಟ್ಟುಹಬ್ಬದ ಉಡುಗೊರೆ ಎಂದೂ ಚಿತ್ರತಂಡ ಹೇಳಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಗುರುದತ್ ಗಾಣಿಗ ನಿರ್ದೇಶಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನೀಡಲಿದ್ದಾರೆ. ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.
ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.