ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿನಿ ಬಿಟ್ಸ್‌: ‘ಪೆಪೆ’ ಸಿನಿಮಾದಲ್ಲಿ ಜೇನು ಕುರುಬರ ಹಾಡು

Published : 8 ಆಗಸ್ಟ್ 2024, 23:36 IST
Last Updated : 8 ಆಗಸ್ಟ್ 2024, 23:36 IST
ಫಾಲೋ ಮಾಡಿ
Comments

‘ಒಂದು ಸರಳ ಪ್ರೇಮಕಥೆ’ ಸಿನಿಮಾ ಬಳಿಕ ನಟ ವಿನಯ್‌ ರಾಜ್‌ಕುಮಾರ್‌ ನಟನೆಯ ‘ಪೆಪೆ’ ಸಿನಿಮಾ ರಿಲೀಸ್‌ಗೆ ಸಜ್ಜಾಗುತ್ತಿದೆ. ಪ್ರಚಾರದ ಅಂಗವಾಗಿ ಚಿತ್ರತಂಡ ‘ಪೆಪೆ ಪ್ರಿಸೆಟ್‌’ ಹೆಸರಿನಲ್ಲಿ ಹಾಡೊಂದನ್ನು ಬಿಡುಗಡೆ ಮಾಡಿದ್ದು, ಜೇನು ಕುರುಬರು ಧ್ವನಿಯಾಗಿರುವುದು ವಿಶೇಷ. 

ಪಿಆರ್‌ಕೆ ಆಡಿಯೊದಲ್ಲಿ ಬಿಡುಗಡೆಯಾಗಿರುವ ಈ ಹಾಡು ಜೇನು ಕುರುಬ ಜನಾಂಗದ ಆಚಾರ ವಿಚಾರ ತೆರೆದಿಟ್ಟಿದೆ. ಗೀತೆಗೆ ಗಿರಿಜನ ಸಮಗ್ರ ಅಭಿವೃದ್ದಿ ಕಲಾಸಂಸ್ಥೆ ಸದಸ್ಯರು ಹಾಗೂ ಜೆ.ಜಿ.ಕುಮಾರ ಧ್ವನಿಯಾಗಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ಈ ಹಾಡಿಗಿದೆ. ಶ್ರೀಲೇಶ್ ಎಸ್. ನಾಯರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ  ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ ಸೇರಿದಂತೆ ದೊಡ್ಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಛಾಯಾಚಿತ್ರಗ್ರಹಣವಿದೆ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಉದಯ್ ಶಂಕರ್.ಎಸ್ ಹಾಗೂ ಬಿ.ಎಂ.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದಿದೆ ಚಿತ್ರತಂಡ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT