ಮಂಗಳವಾರ, ಫೆಬ್ರವರಿ 7, 2023
27 °C

‘ಪೆಪೆ’ಯಲ್ಲಿ ವಿನಯ್‌ ರಾಜ್‌ ಕುಮಾರ್‌ ಹೇಗಿದ್ದಾರೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’ ಚಿತ್ರ ಶೂಟಿಂಗ್‌ ಮುಗಿಸಿದೆ. ಟೀಸರ್‌ ಮೂಲಕವೇ ಸಾಕಷ್ಟು ಕುತೂಹಲ ಹುಟ್ಟಿಸಿದ್ದ ಚಿತ್ರವಿದು. 

ಶ್ರೀಲೇಶ್ ಎಸ್. ನಾಯರ್ ನಿರ್ದೇಶನಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಇಷ್ಟು ದಿನ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಚಿತ್ರತಂಡ ಸಕಲೇಶಪುರದಲ್ಲಿ ನಡೆದ ಕ್ಲೈಮ್ಯಾಕ್ಸ್ ಸೀನ್ ಶೂಟಿಂಗ್ ಬಳಿಕ ಕುಂಬಳಕಾಯಿ ಒಡೆದಿದೆ. ರವಿವರ್ಮಾ ಈ ಚಿತ್ರದ ಸಾಹಸ ನಿರ್ದೇಶಕರು.

ವಿನಯ್ ರಾಜ್‌ಕುಮಾರ್ ಈ ಚಿತ್ರದಲ್ಲಿ ಗ್ಯಾಂಗ್ ಲೀಡರ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಮೆದಿನಿ ಕೆಳಮನಿ, ಯಶ್ ಶೆಟ್ಟಿ, ಕಾಜಲ್ ಕುಂದರ್, ಅರುಣಾ ಬಾಲರಾಜ್, ನವೀನ್ ಡಿ. ಪಡಿಲ್, ಬಾಲಾ ರಾಜ್ವಾಡಿ ಒಳಗೊಂಡ ತಾರಾಬಳಗವಿದೆ. ಅಭಿಷೇಕ್ ಕಾಸರಗೋಡು ಕ್ಯಾಮೆರಾ, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೊಡಗು, ಸಕಲೇಶಪುರದಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಚಿತ್ರವನ್ನು ಉದಯ್ ಮತ್ತು ಶ್ರೀರಾಮ್ ಬಂಡವಾಳ ಹೂಡಿ ನಿರ್ಮಾಣ ಮಾಡಿದ್ದಾರೆ.

2018ರಲ್ಲಿ ತೆರೆಕಂಡ ಅನಂತು v/s ನುಸ್ರುತ್ ಸಿನಿಮಾ ಬಳಿಕ ವಿನಯ್ ರಾಜ್ ಕುಮಾರ್ ಯಾವುದೇ ಸಿನಿಮಾ ತೆರೆಕಂಡಿಲ್ಲ. ‘ಪೆಪೆ’ ಜತೆಗೆ ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳಲ್ಲೂ ವಿನಯ್ ಬ್ಯುಸಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು