ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಿ ಕಿರುಕುಳ: ಹಿನ್ನೆಲೆ ಗಾಯಕಿ ಸುಶ್ಮಿತಾ ಆತ್ಮಹತ್ಯೆ

Last Updated 17 ಫೆಬ್ರುವರಿ 2020, 10:01 IST
ಅಕ್ಷರ ಗಾತ್ರ

ಬೆಂಗಳೂರು:ಪತಿಯ ಕಿರುಕುಳ ತಾಳದೆ ಹಿನ್ನಲೆ ಗಾಯಕಿ ಸುಶ್ಮಿತಾ ರಾಜೇ (26) ನಾಗರಬಾವಿಯಲ್ಲಿನ ಪತಿಯ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎಂಬಿಎ ಪದವೀಧರೆ ಹಾಗೂ ಸುಗಮ ಸಂಗೀತ ಗಾಯಕಿಯಾಗಿದ್ದ ಸುಶ್ಮಿತಾ,ಸಾವಿಗೂ ಮುನ್ನ ಬರೆದಿಟ್ಟಿದ್ದರು ಎನ್ನಲಾದ ಮರಣ ಪತ್ರ ಸಿಕ್ಕಿದ್ದು, ಅದರಲ್ಲಿ ದೈಹಿಕ, ಮಾನಸಿಕ ಕಿರುಕುಳ ತನ್ನ ಸಾವಿಗೆ ಕಾರಣ ಎಂದಿದ್ದಾರೆ.

ತಾಯಿಗೆ ಹಾಗೂತಮ್ಮನಿಗೆ ವಾಟ್ಸ್‌ಆ್ಯಪ್‌ಮೂಲಕ ಸಂದೇಶ ರವಾನಿಸಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಲು ತುಪ್ಪ, ಶ್ರೀ ಸಾಮಾನ್ಯಸೇರಿ ಹಲವು ಚಲನಚಿತ್ರಗಳಿಗೆ ಸುಶ್ಮಿತಾ ಹಾಡಿದ್ದಾರೆ.ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಟ್ಸ್‌ಆ್ಯಪ್‌ಗಳಲ್ಲಿ ಹರಿದಾಡುತ್ತಿರುವ ಸುಶ್ಮಿತಾ ಆತ್ಮಹತ್ಯೆ ಪತ್ರ

ಅಮ್ಮ ಕ್ಷಮಿಸು

ಅಮ್ಮ ನನ್ನನ್ನು ಕ್ಷಮಿಸು ನಾನೇ ಮಾಡಿಕೊಂಡ ತಪ್ಪಿಗೆ ನಾನೇ ಶಿಕ್ಷೆ ಅನುಭವಿಸುತ್ತಿದ್ದೇನೆ. ನನ್ನನ್ನು ದಯವಿಟ್ಟು ಕ್ಷಮಿಸು. ಅವರ ದೊಡ್ಡಮ್ಮನ ಮಾತು ಕೇಳಿಕೊಂಡು ನನಗೆ ಅವರು ಚಿತ್ರಹಿಂಸೆ ಕೊಡುತ್ತಿದ್ದರು. ಪದೇ ಪದೇ ಮನೆ ಬಿಟ್ಟು ಹೋಗು ಅನ್ನುತ್ತಿದ್ದರು. ಮಾನಸಿಕವಾಗಿ ತುಂಬ ಹಿಂಸೆ ಆಗುತ್ತಿತ್ತು. ಅವರನ್ನು ಮಾತ್ರ ಸುಮ್ಮನೆ ಬಿಡಬೇಡ.

ನನ್ನ ಸಾವಿದೆ ಶರತ್, ವೈದೇಹಿ, ಗೀತಾ ನೇರವಾಗಿ ಕಾರಣರಾಗಿದ್ದಾರೆ. ಎಷ್ಟೇ ಬೇಡಿಕೊಂಡು, ಕಾಲು ಹಿಡಿದರೂ ಅವನ ಮನಸ್ಸು ಕರಗಲಿಲ್ಲ. ಅವರ ಮನೆಯಲ್ಲಿ ನನಗೆ ಸಾಯಲು ಇಷ್ಟವಿರಲಿಲ್ಲ. ಮದುವೆ ಆದಾಗಿನಿಂದ ಇದೇ ರೀತಿ ಹಿಂಸೆ ಮಾಡುತ್ತಿದ್ದರು. ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ನನ್ನನ್ನು ನನ್ನ ಅಮ್ಮನ ಊರಿನಲ್ಲಿಯೇ ಮಣ್ಣು ಮಾಡು ಅಥವಾ ಸುಡು. ನನ್ನ ಕಾರ್ಯವನ್ನು ನನ್ನ ತಮ್ಮನೇ ಮಾಡಲಿ. ಅವರನ್ನು ಮಾತ್ರ ಸುಮ್ಮನೆ ಬಿಡಬೇಡ. ಇಲ್ಲವಾದರೆ, ನನ್ನ ಆತ್ಮಕ್ಕೆ ಶಾಂತಿ ದೊರೆಯುವುದಿಲ್ಲ. ಅಮ್ಮ ಮಿಸ್‌ ಯು... ನಿನಗೋಸ್ಕರ ನನ್ನ ತಮ್ಮಸಚಿನ್ ಇದ್ದಾನೆ. ಅವನನ್ನು ಚೆನ್ನಾಗಿ ನೋಡಿಕೊ. ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ.. ಇದನ್ನು ಅಮ್ಮನಿಗೆ ತೋರಿಸಲು ಮರೆಯಬೇಡ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT