ಸೋಮವಾರ, ಮಾರ್ಚ್ 1, 2021
28 °C

ಎರಡು ದಿನದಲ್ಲಿ ₹21 ಕೋಟಿ ಗಳಿಸಿದ ‘ಪೊಗರು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಟ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರವು ಚಿತ್ರಮಂದಿರದತ್ತ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, ಇದು ಎರಡು ದಿನದಲ್ಲಿ ಸಂಗ್ರಹವಾದ ಚಿತ್ರದ ಕಲೆಕ್ಷನ್‌ನಲ್ಲಿ ಬಹಿರಂಗವಾಗಿದೆ.

ಶುಕ್ರವಾರ ಬಿಡುಗಡೆಯಾದ ಈ ಚಿತ್ರವು, ಕರ್ನಾಟಕದಲ್ಲೇ ಎರಡು ದಿನದಲ್ಲಿ ₹21 ಕೋಟಿ ಬಾಚಿಕೊಂಡಿದೆ. ಈ ಕುರಿತು ನಟ ಧ್ರುವ ಸರ್ಜಾ ಅವರೇ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದ ಜನತೆಗೆ ಧನ್ಯವಾದ ಹೇಳಿದ್ದಾರೆ. ಜೊತೆಗೆ ರಾಜ್ಯದಾದ್ಯಂತ ಪೊಗರು ಚಿತ್ರ ಬಿಡುಗಡೆಯಾದ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರು ತುಂಬಿರುವ ದೃಶ್ಯವನ್ನೂ ಅವರು ಅಪ್‌ಲೋಡ್‌ ಮಾಡಿದ್ದಾರೆ. 

ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣದ 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು